ನವದೆಹಲಿ: 2024–25ನೇ ಹಣಕಾಸು ವರ್ಷದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯು ಏಪ್ರಿಲ್ 3ರಿಂದ 5ರ ವರೆಗೆ ನಡೆಯಲಿದೆ.
ಇದರ ಬೆನ್ನಲ್ಲೇ ಗವರ್ನರ್ ಶಕ್ತಿಕಾಂತ ದಾಸ್ ಅವರು, ಬುಧವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸೌಹಾರ್ದವಾಗಿ ಭೇಟಿ ಮಾಡಿ ಚರ್ಚಿಸಿದರು.
ಸಚಿವೆ ನಿರ್ಮಲಾ ಅವರನ್ನು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಅಧ್ಯಕ್ಷೆ ಮಾಧವಿ ಪುರಿ ಬುಚ್ ಕೂಡ ಪ್ರತ್ಯೇಕವಾಗಿ ಭೇಟಿ ಚರ್ಚಿಸಿದ್ದಾರೆ ಎಂದು ಹಣಕಾಸು ಸಚಿವರ ಕಚೇರಿಯು ‘ಎಕ್ಸ್’ನಲ್ಲಿ ತಿಳಿಸಿದೆ.
ಈ ಇಬ್ಬರ ಭೇಟಿಯ ಸಂದರ್ಭದಲ್ಲಿ ನಿರ್ಮಲಾ ಅವರು, ರೆಪೊ ದರ ಕಡಿತ ಮತ್ತು ಷೇರು ಸೂಚ್ಯಂಕಗಳು ಕುಸಿಯುತ್ತಿರುವ ಕುರಿತು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.