ಭಾನುವಾರ, ಜನವರಿ 24, 2021
17 °C

ನಿರೀಕ್ಷೆಗಿಂತ ವೇಗವಾಗಿ ಆರ್ಥಿಕ ಚೇತರಿಕೆ: ಶಕ್ತಿಕಾಂತ ದಾಸ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ದೇಶದ ಅರ್ಥ ವ್ಯವಸ್ಥೆಯು ನಿರೀಕ್ಷೆಗಿಂತಲೂ ಹೆಚ್ಚು ವೇಗವಾಗಿ ಚೇತರಿಕೆ ಕಂಡಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಆದರೆ, ಹಬ್ಬಗಳ ಸಂದರ್ಭದ ಖರೀದಿ ಭರಾಟೆ ಮುಗಿದ ನಂತರ ಮಾರುಕಟ್ಟೆಯಲ್ಲಿ ಬೇಡಿಕೆಯು ಎಷ್ಟು ಸ್ಥಿರವಾಗಿ ಇರುತ್ತದೆ ಎಂಬುದನ್ನು ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಅರ್ಥ ವ್ಯವಸ್ಥೆಯು ಶೇಕಡ (–)23.9ರಷ್ಟು ಕುಸಿತ ಕಂಡಿದೆ. ಇಡೀ ಹಣಕಾಸು ವರ್ಷ ದಲ್ಲಿ ಜಿಡಿಪಿಯು ಶೇಕಡ (–)9.5ರಷ್ಟು ಕುಸಿತ ಕಾಣಲಿದೆ ಎಂದು ಆರ್‌ಬಿಐ ಅಂದಾಜಿಸಿದೆ. ಅರ್ಥ ವ್ಯವಸ್ಥೆಯಲ್ಲಿ ಸುಧಾರಣೆ ಕಂಡುಬಂದಿದ್ದರೂ, ಕೊರೊನಾ ಸೋಂಕು ಯುರೋಪಿನ ಕೆಲವು ಕಡೆ ಗಳಲ್ಲಿ ಹಾಗೂ ಭಾರತದ ಕೆಲವು ಪ್ರದೇಶಗಳಲ್ಲಿ ಹೆಚ್ಚಾಗುತ್ತಿರುವುದು ಅರ್ಥ ವ್ಯವಸ್ಥೆಯ ಪಾಲಿಗೆ ಅಪಾಯಕಾರಿ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು