ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣದುಬ್ಬರ: ಆರ್‌ಬಿಐ ಗವರ್ನರ್ ಕಳವಳ

Last Updated 22 ಜೂನ್ 2022, 15:20 IST
ಅಕ್ಷರ ಗಾತ್ರ

ಮುಂಬೈ: ಹಣದುಬ್ಬರ ದರವು ಹೆಚ್ಚಿನ ಮಟ್ಟದಲ್ಲಿಯೇ ಮುಂದುವರಿಯುವುದು ಅರ್ಥ ವ್ಯವಸ್ಥೆಯ ಪಾಲಿಗೆ ಕಳವಳ ಮೂಡಿಸುವ ಸಂಗತಿ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರು ಹಣಕಾಸು ನೀತಿ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಣದುಬ್ಬರವನ್ನು ನಿಯಂತ್ರಿಸುವ ಉದ್ದೇಶದಿಂದ ರೆಪೊ ದರವನ್ನು ಶೇ 0.50ರಷ್ಟು ಹೆಚ್ಚಿಸುವ ತೀರ್ಮಾನ ಕೈಗೊಂಡ ಸಂದರ್ಭದಲ್ಲಿ ಅವರು ಈ ಮಾತು ಆಡಿದ್ದಾರೆ. ಎಂಪಿಸಿ ಸಭೆಯ ವಿವರಗಳನ್ನು ಆರ್‌ಬಿಐ ಬುಧವಾರ ಪ್ರಕಟಿಸಿದೆ. ಹಣದುಬ್ಬರ ಇದ್ದರೂ ಆರ್ಥಿಕ ಚಟುವಟಿಕೆಗಳ ಪುನಶ್ಚೇತನವು ಆಗುತ್ತಿದೆ ಎಂದು ದಾಸ್ ಅವರು ಸಭೆಯಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT