ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

RBI Monetary Policy: ರೆಪೊ ದರ ಯಥಾಸ್ಥಿತಿ ಸಾಧ್ಯತೆ?

Published 7 ಫೆಬ್ರುವರಿ 2024, 14:36 IST
Last Updated 7 ಫೆಬ್ರುವರಿ 2024, 14:36 IST
ಅಕ್ಷರ ಗಾತ್ರ

ಮುಂಬೈ: ಭಾರತೀಯ ರಿಸರ್ವ್‌ ಬ್ಯಾಂಕ್‌ನ ಗವರ್ನರ್‌ ಶಕ್ತಿಕಾಂತ ದಾಸ್‌ ಅವರ ನೇತೃತ್ವದಲ್ಲಿ ನಡೆದಿರುವ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯ ನಿರ್ಧಾರಗಳು ಗುರುವಾರ ಪ್ರಕಟವಾಗಲಿವೆ.

ಸದ್ಯ ರೆಪೊ ದರವು ಶೇ 6.5ರಷ್ಟಿದೆ. ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಶೇ 6ರ ಹತ್ತಿರದಲ್ಲಿದೆ. ಹಾಗಾಗಿ, ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆಯಲ್ಲಿ ರೆಪೊ ದರವನ್ನು ಶೇ 6.5ರಲ್ಲಿಯೇ ಉಳಿಸಿಕೊಳ್ಳುವ ಸಾಧ್ಯತೆ ಇದೆ. ಇದರಿಂದ ಗೃಹ ಸಾಲದ ಇಎಂಐ ಇಳಿಕೆಯ ನಿರೀಕ್ಷೆಯಲ್ಲಿದ್ದ ಸಾಲಗಾರರಿಗೆ ನಿರಾಶೆಯಾಗುವುದು ಸಹಜ ಎಂದು ಮೂಲಗಳು ಹೇಳಿವೆ. 

ಹಣದುಬ್ಬರವನ್ನು ನಿಯಂತ್ರಿಸುವ ದೃಷ್ಟಿಯಿಂದ 2023ರ ಫೆಬ್ರುವರಿಯಲ್ಲಿ ನಡೆದ ಎಂಪಿಸಿ ಸಭೆಯಲ್ಲಿ ರೆಪೊ ದರವನ್ನು ಶೇ 6.25ರಿಂದ ಶೇ 6.5ಕ್ಕೆ ಹೆಚ್ಚಿಸಲಾಗಿತ್ತು. ಆ ನಂತರ ನಡೆದ ಸಭೆಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. 

2023–24ನೇ ಹಣಕಾಸು ವರ್ಷದ ಜುಲೈನಲ್ಲಿ ಚಿಲ್ಲರೆ ಹಣದುಬ್ಬರವು ಶೇ 7.44ರಷ್ಟು ಗರಿಷ್ಠ ಮಟ್ಟದಲ್ಲಿ ದಾಖಲಾಗಿತ್ತು. ಡಿಸೆಂಬರ್‌ನಲ್ಲಿ ಶೇ 5.69ರಷ್ಟು ದಾಖಲಾಗಿದೆ. ಹಣದುಬ್ಬರವನ್ನು ಶೇ 4ರಿಂದ ಶೇ 6ರಲ್ಲಿ ನಿಯಂತ್ರಿಸಲು ಆರ್‌ಬಿಐ ಮಿತಿ ಹಾಕಿಕೊಂಡಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT