ಗುರುವಾರ , ಮೇ 26, 2022
29 °C

ರಿಲಯನ್ಸ್ ಕ್ಯಾಪಿಟಲ್ ವಿರುದ್ಧ ದಿವಾಳಿ ಪ್ರಕ್ರಿಯೆ ಆರಂಭಿಸಲು ಅರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಸಾಲದ ಸುಳಿಗೆ ಸಿಲುಕಿರುವ ರಿಲಯನ್ಸ್ ಕ್ಯಾಪಿಟಲ್ ಕಂಪನಿ ವಿರುದ್ಧ ಕಾರ್ಪೊರೇಟ್ ದಿವಾಳಿ ಪ್ರಕ್ರಿಯೆ ಆರಂಭಿಸಲು ಭಾರತೀಯ ರಿಸರ್ವ್‌ ಬ್ಯಾಂಕ್‌, ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ (ಎನ್‌ಸಿಎಲ್‌ಟಿ) ಮುಂಬೈ ಶಾಖೆಯಲ್ಲಿ ಅರ್ಜಿ ಸಲ್ಲಿಸಿದೆ.

ಅನಿಲ್ ಅಂಬಾನಿ ಒಡೆತನದ ರಿಲಯನ್ಸ್ ಕ್ಯಾಪಿಟಲ್‌ನ ಆಡಳಿತ ಮಂಡಳಿಯನ್ನು ಸೂ‍ಪರ್‌ಸೀಡ್ ಮಾಡಿ ಆರ್‌ಬಿಐ ನವೆಂಬರ್ 29ರಂದು ಆದೇಶ ಹೊರಡಿಸಿದೆ. ಬ್ಯಾಂಕ್‌ ಆಫ್‌ ಮಹಾರಾಷ್ಟ್ರದ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ವೈ. ನಾಗೇಶ್ವರ ರಾವ್ ಅವರನ್ನು ಕಂಪನಿಯ ಆಡಳಿತಗಾರ ಆಗಿ ಆರ್‌ಬಿಐ ನೇಮಿಸಿದೆ.

ಸೆಪ್ಟೆಂಬರ್‌ನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ರಿಲಯನ್ಸ್ ಕ್ಯಾಪಿಟಲ್ ಕಂಪನಿಯು, ತನ್ನ ಒಟ್ಟು ಸಾಲದ ಮೊತ್ತವು ₹ 40 ಸಾವಿರ ಕೋಟಿ ಎಂದು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು