ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತತ ಆರನೇ ಬಾರಿಯೂ ರೆಪೊ ದರ ಬದಲಿಲ್ಲ: ಆರ್‌ಬಿಐ

Last Updated 4 ಜೂನ್ 2021, 6:06 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಸತತ 6ನೇ ಬಾರಿಯೂ ರೆಪೊ ದರದಲ್ಲಿ (ಶೇ 4) ಬದಲಾವಣೆ ಮಾಡದಿರಲು ನಿರ್ಧರಿಸಿದೆ. ಕೋವಿಡ್‌ ಎರಡನೇ ಅಲೆಯು ದೇಶದ ಆರ್ಥಿಕತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿರುವ ಕಾರಣ ಈ ನಿರ್ಧಾರ ತೆಗೆದುಕೊಂಡಿದೆ.

ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದ ಹಣಕಾಸು ನೀತಿ ಸಮಿತಿಯು (ಎಂಪಿಸಿ) ಸತತ ಆರನೇ ಬಾರಿಗೆ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.

ಆರ್‌ಬಿಐ 2020ರ ಮೇ 22ರಲ್ಲಿ ಕೊನೆಯ ಬಾರಿಗೆ ದರವನ್ನು ಪರಿಷ್ಕರಿಸಿತ್ತು. ಇದರಿಂದ ಬಡ್ಡಿದರ ಐತಿಹಾಸಿಕ ಕನಿಷ್ಠ ಮಟ್ಟಕ್ಕೆ ಇಳಿದಿತ್ತು.

ದ್ವೈ–ಮಾಸಿಕ ವಿತ್ತೀಯ ನೀತಿ ಪರಿಶೀಲನೆಯನ್ನು ಪ್ರಕಟಿಸುವ ವೇಳೆ ಶಕ್ತಿಕಾಂತ ದಾಸ್‌ ಅವರು ಈ ಮಾಹಿತಿ ನೀಡಿದರು.

ಇದರ ಪರಿಣಾಮವಾಗಿ, ರಿವರ್ಸ್ ರೆಪೊ ದರದಲ್ಲೂ ಬದಲಾವಣೆ ಇರುವುದಿಲ್ಲ. ಆರ್‌ಬಿಐನಲ್ಲಿ ಇಟ್ಟಿರುವ ಠೇವಣಿಗಳಿಗಾಗಿ ಬ್ಯಾಂಕುಗಳಿಗೆ ಶೇಕಡಾ 3.35 ರಷ್ಟು ಬಡ್ಡಿ ಮುಂದುವರಿಯುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT