ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ

Published 7 ಜೂನ್ 2024, 5:39 IST
Last Updated 7 ಜೂನ್ 2024, 5:39 IST
ಅಕ್ಷರ ಗಾತ್ರ

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸತತವಾಗಿ 8ನೇ ಬಾರಿಗೆ ಹಣಕಾಸು ನೀತಿಯಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಿದೆ. ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಹಣದುಬ್ಬರ ನಿಯಂತ್ರಣದ ಬಿಗಿ ಕ್ರಮಗಳನ್ನು ಮುಂದುವರಿಸಲು ತೀರ್ಮಾನಿಸಿದೆ.

2023ರ ಏಪ್ರಿಲ್‌ನಿಂದ ಆರ್‌ಬಿಐ ದರ ಏರಿಕೆಯನ್ನು ನಿಲ್ಲಿಸಿದೆ. 2022ರ ಮೇ ತಿಂಗಳಿನಿಂದ 250 ಮೂಲಾಂಶಗಳ ಏರಿಕೆ ಮಾಡಲಾಗಿತ್ತು.

2ನೇ ದ್ವೈಮಾಸಿಕ ಹಣಕಾಸು ನೀತಿ ಘೋಷಣೆ ಮಾಡಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಶೇ. 6.5 ರಷ್ಟಿರುವ ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಹಣಕಾಸು ನೀತಿ ಸಮಿತಿ(ಎಂಪಿಸಿ) ನಿರ್ಧರಿಸಿದೆ ಎಂದು ಹೇಳಿದ್ದಾರೆ.

ವಾಡಿಕೆಯಂತೆ ಮುಂಗಾರು ಮಳೆಯಾಗುವ ಸಾಧ್ಯತೆ ಇದ್ದು, ಎಂಪಿಸಿ ಏರುಗತಿಯಲ್ಲಿರುವ ಆಹಾರ ಹಣದುಬ್ಬರದ ಬಗ್ಗೆ ಗಮನ ಕೇಂದ್ರೀಕರಿಸಿದೆ ಎಂದು ಅವರು ಹೇಳಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡ 7 ರಷ್ಟು ಬೆಳವಣಿಗೆ ಅಂದಾಜಿಸಿದ್ದ ಆರ್‌ಬಿಐ, ಮುಂದೆ ಶೇಕಡ 7.2ರಷ್ಟು ಬೆಳವಣಿಗೆ ದರವನ್ನು ಅಂದಾಜಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT