ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Repo Rate: ಸತತ 9ನೇ ಬಾರಿ ರೆಪೊ ದರ ಯಥಾಸ್ಥಿತಿ

Published 8 ಆಗಸ್ಟ್ 2024, 5:29 IST
Last Updated 8 ಆಗಸ್ಟ್ 2024, 5:29 IST
ಅಕ್ಷರ ಗಾತ್ರ

ಮುಂಬೈ: ಆಹಾರ ಹಣದುಬ್ಬರ ಇಳಿಕೆಯಾಗದ ಕಾರಣ ಭಾರತೀಯ ರಿಸರ್ವ್‌ ಬ್ಯಾಂಕ್‌, ಸತತ ಒಂಬತ್ತನೇ ಬಾರಿಗೆ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. 

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಗವರ್ನರ್‌ ಶಕ್ತಿಕಾಂತ ದಾಸ್‌ ಈ ಮಾಹಿತಿ ನೀಡಿದರು.

ಕೇಂದ್ರ ಬಜೆಟ್‌ ಬಳಿಕ ಇತ್ತೀಚೆಗೆ ನಡೆದ ಆರ್‌ಬಿಐನ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯಲ್ಲಿ ಸದಸ್ಯರು ರೆಪೊ ದರವನ್ನು ಶೇ 6.5ರಲ್ಲಿಯೇ ಕಾಯ್ದುಕೊಳ್ಳಲು ಒಪ್ಪಿಗೆ ನೀಡಿದ್ದಾರೆ ಎಂದರು.

ಚಿಲ್ಲರೆ ಹಣದುಬ್ಬರವನ್ನು ಶೇ 4ರ ಮಿತಿಯಲ್ಲಿ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ರೆಪೊ ದರದಲ್ಲಿ ಬದಲಾವಣೆ ಮಾಡಿಲ್ಲ. ಹಣದುಬ್ಬರವು ಶೇ 4ರ ಮಿತಿ ಅಥವಾ ಅದಕ್ಕಿಂತ ಕೆಳಗೆ ಇಳಿಕೆಯಾದರಷ್ಟೇ ಆರ್‌ಬಿಐನ ಹಣಕಾಸು ನೀತಿಯಲ್ಲಿ ಬದಲಾವಣೆ ಮಾಡಲು ಸಾಧ್ಯ ಎಂದು ಅವರು ಸ್ಪಷ್ಟಪಡಿಸಿದರು.

ಹೆಚ್ಚುತ್ತಿರುವ ಆಹಾರ ಹಣದುಬ್ಬರದ ಬಗ್ಗೆ ಎಂಪಿಸಿ ನಿಗಾ ವಹಿಸುತ್ತಿದ್ದು ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್‌ಬಿಐ ಬೆಳವಣಿಗೆಯನ್ನು ಶೇ. 7.2ಕ್ಕೆ ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT