ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ನ (ಆರ್ಬಿಐ) ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯು ಏಪ್ರಿಲ್ 7ರಿಂದ 9ರ ವರೆಗೆ ನಡೆಯಲಿದೆ. ಗವರ್ನರ್ ಸಂಜಯ್ ಮಲ್ಹೋತ್ರಾ ಅಧ್ಯಕ್ಷತೆವಹಿಸಲಿದ್ದಾರೆ.

ಚಿಲ್ಲರೆ ಹಣದುಬ್ಬರವು ಆರ್ಬಿಐನ ನಿಗದಿತ ಗುರಿಗಿಂತ ಕಡಿಮೆ ದಾಖಲಾಗಿದೆ. ಅಮೆರಿಕದ ಪ್ರತಿ ಸುಂಕ ನೀತಿಯು ಭಾರತ ಸೇರಿ ಜಾಗತಿಕ ಆರ್ಥಿಕತೆ ಬೆಳವಣಿಗೆಗೆ ಸವಾಲೊಡ್ಡಿದೆ. ಹಾಗಾಗಿ, ದೇಶದ ಒಟ್ಟು ಆಂತರಿಕ ಉತ್ಪನ್ನದ (ಜಿಡಿಪಿ) ಪ್ರಗತಿಗೆ ಪೂರಕ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಈ ಬಾರಿಯೂ ರೆಪೊ ದರದಲ್ಲಿ ಶೇ 0.25ರಷ್ಟು ಕಡಿತಗೊಳಿಸುವ ನಿರೀಕ್ಷೆಯಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ.

ಫೆಬ್ರುವರಿಯಲ್ಲಿ ನಡೆದ ಸಭೆಯಲ್ಲಿ ಶೇ 0.25ರಷ್ಟು ಬಡ್ಡಿದರ ಕಡಿತಗೊಳಿಸಲಾಗಿತ್ತು. ಬುಧವಾರದಂದು ಗವರ್ನರ್ ಅವರು, ಸಭೆಯ ನಿರ್ಣಯಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.