ಗುರುವಾರ , ಅಕ್ಟೋಬರ್ 1, 2020
27 °C

ಆರ್‌ಬಿಐ | ರೆಪೊ ದರದಲ್ಲಿ ಬದಲಾವಣೆ ಇಲ್ಲ, ಯಥಾಸ್ಥಿತಿ ಮುಂದುವರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತೀಯ ರಿಸರ್ವ್‌ ಬ್ಯಾಂಕ್‌ ಗುರುವಾರ ರೆಪೊ ದರ (ಆರ್‌ಬಿಐ ಬ್ಯಾಂಕ್‌ಗಳಿಗೆ ನೀಡುವ ಸಾಲದ ಮೇಲಿನ ಬಡ್ಡಿದರ) ಪ್ರಕಟಿಸಿದ್ದು, ಯಾವುದೇ ಬದಲಾವಣೆ ಮಾಡದೆ  ಶೇ 4 ರಷ್ಟನ್ನು ಮುಂದುವರಿಸಿದೆ.

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ನೇತೃತ್ವದಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು (ಎಂಪಿಸಿ) ಸಭೆ ನಡೆಸಿ ಈ ನಿರ್ಧಾರ ಪ್ರಕಟಿಸಲಾಗಿದೆ. 

ಕೊರೊನಾ ವೈರಸ್‌ ಸೋಂಕಿನ ಸಂಕಷ್ಟದಲ್ಲಿ ಹಣದ ಹರಿವು ಇರುವಂತೆ ಆರ್‌ಬಿಐ ಗಮನಿಸುತ್ತಿದೆ. ಕೋವಿಡ್–19 ತಡೆಗಾಗಿ ಜಗತ್ತಿನಾದ್ಯಂತ ಲಾಕ್‌ಡೌನ್‌ ಪರಿಣಾಮ ಜಾಗತಿಕ ಆರ್ಥಿಕ ಚಟುವಟಿಕೆಗಳು ತಟಸ್ಥಗೊಂಡಿವೆ. 2020ರಲ್ಲಿ ನಿರೀಕ್ಷಿಸಲಾಗಿದ್ದ ಜಾಗತಿಕ ಆರ್ಥಿಕತೆ ಚೇತರಿಕೆ ಕುಂಠಿತವಾಗಿದೆ ಎಂದು ಆರ್‌ಬಿಐ ಗವರ್ನರ್‌ ಹೇಳಿದ್ದಾರೆ. 

ನಗದು ಮೀಸಲು ಅನುಪಾತವನ್ನು (ಸಿಆರ್‌ಆರ್)  ಆರ್‌ಬಿಐ 100 ಅಂಶ ಕಡಿತಗೊಳಿಸುವ ಮೂಲಕ ಶೇ 3 ನಿಗದಿ ಪಡಿಸಿದೆ. ಇದು ಮುಂದಿನ 1 ವರ್ಷಗಳ ವರೆಗೂ ಮುಂದುವರಿಯಲಿದೆ. ಇದರಿಂದಾಗಿ ಬ್ಯಾಂಕಿಂಗ್‌ ವಲಯದಲ್ಲಿ  ₹1.37 ಲಕ್ಷ ಕೋಟಿ ಹಣದ ಹರಿವು ಇರಲಿದೆ ಎಂದಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು