ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೆಪೊ ದರದಲ್ಲಿ ಬದಲಾವಣೆ ಇಲ್ಲ: ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್‌

Published 10 ಆಗಸ್ಟ್ 2023, 5:52 IST
Last Updated 10 ಆಗಸ್ಟ್ 2023, 5:52 IST
ಅಕ್ಷರ ಗಾತ್ರ

ಮುಂಬೈ: ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಹಣಕಾಸು ನೀತಿ ಸಮಿತಿಯು (ಎಂಪಿಸಿ) ರೆಪೊ ದರವನ್ನು ಶೇಕಡ 6.50ರಲ್ಲಿ ಕಾಯ್ದುಕೊಳ್ಳುವ ತೀರ್ಮಾನವನ್ನು ಕೈಗೊಂಡಿದೆ.

ಮೂರು ದಿನ ಚರ್ಚೆ ನಡೆಸಿದ ಎಂಪಿಸಿ ಸದಸ್ಯರು ರೆಪೊ ದರದಲ್ಲಿ ಬದಲಾವಣೆ ಮಾಡದಿರಲು ಸರ್ವಾನುಮತದಿಂದ ಒಪ್ಪಿದ್ದಾರೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆ.

2024ರ ಆರ್ಥಿಕ ವರ್ಷದಲ್ಲಿ ಜಿಡಿಪಿ ಬೆಳವಣಿಗೆ ದರ ಶೇ 6.5 ರಷ್ಟು ಇರಲಿದೆ ಎಂದು ಎಂಪಿಸಿ ಅಂದಾಜಿಸಿರುವುದಾಗಿಯೂ ಅವರು ತಿಳಿಸಿದ್ದಾರೆ.

ಆಗಸ್ಟ್‌ 8, 9 ಮತ್ತು 10ರಂದು ಎಂಪಿಸಿ ಸಭೆ ನಡೆದಿದೆ.

ಇದನ್ನೂ ಓದಿ: ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಆರ್‌ಬಿಐ ನಿರ್ಧಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT