ರಾಷ್ಟ್ರೀಯ ಸಾಂಖ್ಯಿಕ ಆಯೋಗದ ಮಾಜಿ ಅಧ್ಯಕ್ಷ ಆರ್.ಬಿ. ಬರ್ಮನ್, ರಾಷ್ಟ್ರೀಯ ಅನ್ವಯಿಕ ಆರ್ಥಿಕ ಸಂಶೋಧನಾ ಮಂಡಳಿಯ ಸೋನಾಲ್ಡೆ ದೇಸಾಯಿ, ಪುಣೆಯ ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಬ್ಯಾಂಕ್ ಮ್ಯಾನೇಜ್‌ಮೆಂಟ್‌ನ ನಿರ್ದೇಶಕ ಪಾರ್ಥ ರೇ, ರಾಷ್ಟ್ರೀಯ ಸಾಂಖ್ಯಿಕ ಆಯೋಗದ ಮಾಜಿ ಅಧ್ಯಕ್ಷ ಬಿಮಲ್ ರಾಯ್, ಒಇಸಿಡಿಯ ಮಾಜಿ ಮುಖ್ಯ ಸಂಖ್ಯಾಶಾಸ್ತ್ರಜ್ಞ ಪಾಲ್ ಶ್ರೇಯರ್, ಬ್ಯಾಂಕ್ ಆಫ್ ಇಂಟರ್‌ನ್ಯಾಷನಲ್ ಸೆಟಲ್‌ಮೆಂಟ್ಸ್‌ನ ಬ್ರೂನೋ ಟಿಸ್ಸಾಟ್ ಮತ್ತು ಆರ್‌ಬಿಐನ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಸುದರ್ಶನ್ ಸೇನ್, ಆರ್‌ಬಿಐನ ಕಾರ್ಯ ನಿರ್ವಾಹಕ ನಿರ್ದೇಶಕರಾದ ಮುನೀಶ್ ಕಪೂರ್ ಮತ್ತು ಓ.ಪಿ.ಮಾಲ್ ತಜ್ಞರ ಸಮಿತಿಯ ಸದಸ್ಯರಾಗಿರುತ್ತಾರೆ ಎಂದು ಆರ್‌ಬಿಐ ತಿಳಿಸಿದೆ.