ಮುಂಬೈ: ಆರ್ಥಿಕತೆಯಲ್ಲಿ ಹಣಕಾಸು ಸ್ಥಿರತೆ ಕಾಯ್ದುಕೊಳ್ಳುವ ಉದ್ದೇಶಕ್ಕೆ ಮುಕ್ತ ಮಾರುಕಟ್ಟೆ ಕಾರ್ಯಾಚರಣೆ ಮೂಲಕ ₹ 10 ಸಾವಿರ ಕೋಟಿ ಒದಗಿಸಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.

ಕೊರೊನಾ ವೈರಸ್ ಹಾವಳಿಯಿಂದ ದೇಶದಲ್ಲಿ ಉದ್ಭವಿಸಿರುವ ಆರ್ಥಿಕ ಸಂಕಷ್ಟಕ್ಕೆ ನೆರವಾಗಲು ಶುಕ್ರವಾರ ಈ ನಗದು ಭರ್ತಿ ಪ್ರಕ್ರಿಯೆ ನಡೆಯಲಿದೆ. ಮಾರುಕಟ್ಟೆಯ ಎಲ್ಲ ವಲಯಗಳು ನಗದು ಲಭ್ಯತೆಯೊಂದಿಗೆ ಸ್ಥಿರವಾಗಿ ಸಾಮಾನ್ಯ ರೀತಿಯಲ್ಲಿ ಕಾರ್ಯನಿರ್ವಹಿಸುವ ಅಗತ್ಯ ಇದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶುಕ್ರವಾರ ಸರ್ಕಾರದ ಸಾಲ ಪತ್ರಗಳನ್ನು ₹ 10 ಸಾವಿರ ಕೋಟಿಗಳಿಗೆ ಖರೀದಿಸಲು ಆರ್ಬಿಐ ಉದ್ದೇಶಿಸಿದೆ.

’ಆರ್ಥಿಕ ಸಂಕಷ್ಟ ಪರಿಸ್ಥಿತಿ ಎದುರಿಸಲು ಕೇಂದ್ರೀಯ ಬ್ಯಾಂಕ್ ಸನ್ನದ್ಧ ಸ್ಥಿತಿಯಲ್ಲಿದ್ದು, ಅಗತ್ಯ ಬಿದ್ದರೆ ತನ್ನ ಬಳಿ ಲಭ್ಯ ಇರುವ ಅಗತ್ಹ ಕ್ರಮಗಳನ್ನು ಕೈಗೊಳ್ಳಲಿದೆ‘ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸೋಮವಾರ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.