ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರಕ್ಕೆ ₹ 30,307 ಕೋಟಿ ಲಾಭಾಂಶ: ಆರ್‌ಬಿಐ

Last Updated 20 ಮೇ 2022, 11:16 IST
ಅಕ್ಷರ ಗಾತ್ರ

ಮುಂಬೈ: 2022ರ ಮಾರ್ಚ್‌ಗೆ ಕೊನೆಗೊಂಡ ಹಣಕಾಸು ವರ್ಷಕ್ಕೆ ಕೇಂದ್ರ ಸರ್ಕಾರಕ್ಕೆ ₹ 30,307 ಕೋಟಿ ಲಾಭಾಂಶ ಪಾವತಿಸಲು ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ಹೇಳಿದೆ.

ಇದೇ ವೇಳೆ, ಅನಿಶ್ಚಿತ ಸಂದರ್ಭಗಳಲ್ಲಿ ಬಳಸಲು ತೆಗೆದಿರಿಸುವ ಮೊತ್ತದ ಪ್ರಮಾಣವನ್ನು ಶೇಕಡ 5.50ರಲ್ಲಿ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಈ ಹಿಂದೆ 2020ರ ಜುಲೈನಿಂದ 2021ರ ಮಾರ್ಚ್ ಅವಧಿಗೆ ₹ 99,122 ಕೋಟಿ ಲಾಭಾಂಶವನ್ನು ಸರ್ಕಾರಕ್ಕೆ ನೀಡುವುದಾಗಿ ಆರ್‌ಬಿಐ ಘೋಷಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT