ಶನಿವಾರ, ಸೆಪ್ಟೆಂಬರ್ 26, 2020
23 °C

ಆರ್‌ಬಿಐನಿಂದ ಸರ್ಕಾರಕ್ಕೆ ₹ 57 ಸಾವಿರ ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: 2019-20ನೇ ಸಾಲಿನಲ್ಲಿ ಕೇಂದ್ರ ಸರ್ಕಾರಕ್ಕೆ ₹ 57,128 ಕೋಟಿಯನ್ನು ಡಿವಿಡೆಂಡ್ ರೂಪದಲ್ಲಿ ವರ್ಗಾವಣೆ ಮಾಡಲು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ತೀರ್ಮಾನಿಸಿದೆ. ಈ ಸಾಲಿನಲ್ಲಿ ಆರ್‌ಬಿಐನಿಂದ ₹ 60 ಸಾವಿರ ಸಿಗಲಿದೆ ಎಂದು ಸರ್ಕಾರ ಅಂದಾಜಿಸಿತ್ತು.

ಆರ್‌ಬಿಐನ ಗವರ್ನರ್ ಶಕ್ತಿಕಾಂತ ದಾಸ್ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮಂಡಳಿಯ ಸಭೆಯಲ್ಲಿ, ಈಗಿನ ಆರ್ಥಿಕ ಪರಿಸ್ಥಿತಿ ಹಾಗೂ ಕೋವಿಡ್‌–19ನಿಂದ ತೊಂದರೆಗೆ ಸಿಲುಕಿರುವ ಅರ್ಥ ವ್ಯವಸ್ಥೆಯನ್ನು ಸರಿಪಡಿಸಲು ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು