ಅಮೆರಿಕದ ಕೇಂದ್ರೀಯ ಬ್ಯಾಂಕ್ ಆದ ಫೆಡರಲ್ ರಿಸರ್ವ್, ನಾಲ್ಕು ವರ್ಷದ ನಂತರ ಮೊದಲ ಬಾರಿಗೆ ಬಡ್ಡಿದರ ಕಡಿತಗೊಳಿಸುವ ನಿರೀಕ್ಷೆಯಿದೆ. ಇದು ಇತರೆ ದೇಶದ ಕೇಂದ್ರೀಯ ಬ್ಯಾಂಕ್‌ಗಳ ಮೇಲೆ ಪರಿಣಾಮ ಬೀರಲಿದೆ. ಆರ್‌ಬಿಐ ಆಹಾರ ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡೇ ರೆಪೊ ದರ ಕಡಿತಗೊಳಿಸಲಿದೆ ಎಂದು ಪಿಟಿಐಗೆ ಬುಧವಾರ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.