ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಬಿಐನ ಹಣಕಾಸು ನೀತಿ ಸಮಿತಿ ಸಭೆ ಆರಂಭ

Published 3 ಏಪ್ರಿಲ್ 2024, 15:21 IST
Last Updated 3 ಏಪ್ರಿಲ್ 2024, 15:21 IST
ಅಕ್ಷರ ಗಾತ್ರ

ಮುಂಬೈ: ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ ಸಭೆಯು (ಎಂಪಿಸಿ) ಬುಧವಾರ ಆರಂಭಗೊಂಡಿದೆ. 

ಚಿಲ್ಲರೆ ಹಣದುಬ್ಬರ ನಿಯಂತ್ರಣ ಹಾಗೂ ಆರ್ಥಿಕತೆಯ ವೇಗ ಕಾಯ್ದುಕೊಳ್ಳುವ ಸವಾಲು ಆರ್‌ಬಿಐನ ಮುಂದಿದೆ. ಹಾಗಾಗಿ, ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ನಿರೀಕ್ಷೆಯಿದೆ. ಶುಕ್ರವಾರದಂದು ಗವರ್ನರ್‌ ಶಕ್ತಿಕಾಂತ ದಾಸ್‌ ಅವರು, ಬಡ್ಡಿದರಕ್ಕೆ ಸಂಬಂಧಿಸಿದಂತೆ ಸಭೆಯ ನಿರ್ಣಯವನ್ನು ಪ್ರಕಟಿಸಲಿದ್ದಾರೆ.

2024–25ನೇ ಹಣಕಾಸು ವರ್ಷದಲ್ಲಿ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಪ್ರಸ್ತುತ ರೆಪೊ ದರವು ಶೇ 6.5ರಷ್ಟಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT