ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 5.2ರಷ್ಟು ಜಿಡಿಪಿ: ನಿರೀಕ್ಷೆ

Last Updated 30 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ನವದೆಹಲಿ: ದೇಶದ ನೈಜ ಆರ್ಥಿಕ ವೃದ್ಧಿ ದರವು ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇ 5.2ರಷ್ಟಿರಲಿದೆ ಎಂದು ಆರ್ಥಿಕ ತನಿಖಾ ಘಟಕ (ಇಐಯು) ಹೇಳಿದೆ.

ವ್ಯಾಪಾರ–ವಹಿವಾಟು ನಡೆಸಲು ಆತ್ಮವಿಶ್ವಾಸದ ಕೊರತೆ ಕಂಡುಬಂದಿದೆ. ಜನರ ಖರೀದಿ ಸಾಮರ್ಥ್ಯ ಕುಸಿದಿದೆ. ಹಣಕಾಸು ವಲಯದ ಸ್ಥಿತಿ ಹದಗೆಟ್ಟಿದೆ. ಈ ಎಲ್ಲಾ ಅಂಶಗಳು ದೇಶದಲ್ಲಿ ಹೂಡಿಕೆ ಚಟುವಟಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂದು ವಿಶ್ಲೇಷಣೆ ಮಾಡಿದೆ.

ಐಇಯು ಪ್ರಕಾರ, ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ದರ ಆರು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿಯಲಿದ್ದು, ಮೂರನೇ ತ್ರೈಮಾಸಿಕದಲ್ಲಿ ತುಸು ಚೇತರಿಕೆ ಕಂಡುಕೊಳ್ಳಲಿದೆ ಎಂದು ಹೇಳಿದೆ.

ಆರ್ಥಿಕತೆಗೆ ಚೇತರಿಕೆ ನೀಡಲು ಕೇಂದ್ರ ಸರ್ಕಾರ ಹಲವು ರೀತಿಯ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಇದರಿಂದಾಗಿ ಮುಂದಿನ ವರ್ಷ ಶೇ 6.7ರಷ್ಟು ಬೆಳವಣಿಗೆ ಸಾಧಿಸಲಿದೆ.

ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ದರ ಆರು ವರ್ಷಗಳ ಕನಿಷ್ಠ ಮಟ್ಟವಾದ ಶೇ 5ಕ್ಕೆ ಕುಸಿದಿದೆ. ನಿರಂತರವಾಗಿ ಐದನೇ ತ್ರೈಮಾಸಿಕಗಳಲ್ಲಿಯೂ ಜಿಡಿಪಿ ಬೆಳವಣಿಗೆಯಲ್ಲಿ ಇಳಿಕೆ ಕಂಡುಬಂದಿದೆ. ಜಾಗತಿಕ ವಿದ್ಯಮಾನಗಳ ಪ್ರಭಾವಕ್ಕೆ ಒಳಗಾಗಿ ಬೇಡಿಕೆ ಕಡಿಮೆಯಾಗುತ್ತಿದ್ದು, ಖಾಸಗಿ ಹೂಡಿಕೆಯೂ ಇಳಿಮುಖವಾಗಿದೆ.

ಗ್ರಾಹಕರು ಮತ್ತು ವಹಿವಾಟುದಾರರ ವಿಶ್ವಾಸ ಕಡಿಮೆ ಮಟ್ಟದಲ್ಲಿದೆ. ಕಾರು ಮಾರಾಟ ಜುಲೈನಲ್ಲಿ ಶೇ 30ರಷ್ಟು ಭಾರಿ ಕುಸಿತ ಕಂಡಿದೆ. ಹಣಕಾಸು ವಲಯದಲ್ಲಿನ ಬಿಕ್ಕಟ್ಟಿನಿಂದಾಗಿ ಸಾಲ ನೀಡಿಕೆಯಲ್ಲಿಯೂ ನಿರೀಕ್ಷಿತ ಮಟ್ಟದ ಬೆಳವಣಿಗೆ ಕಂಡುಬರುತ್ತಿಲ್ಲ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT