ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಮಾರಾಟ: 6 ತಿಂಗಳಿನಲ್ಲಿ ಶೇ 9ರಷ್ಟು ಏರಿಕೆ

Published 12 ಅಕ್ಟೋಬರ್ 2023, 18:41 IST
Last Updated 12 ಅಕ್ಟೋಬರ್ 2023, 18:41 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌–ಸೆಪ್ಟೆಂಬರ್‌ ಅವಧಿಯಲ್ಲಿ ವಾಹನಗಳ ರಿಟೇಲ್‌ ಮಾರಾಟವು ಶೇ 9ರಷ್ಟು ಹೆಚ್ಚಳ ಆಗಿದೆ ಎಂದು ವಾಹನ ವಿತರಕರ ಸಂಘಟನೆಗಳ ಒಕ್ಕೂಟ (ಎಫ್‌ಎಡಿಎ) ಗುರುವಾರ ತಿಳಿಸಿದೆ.

2022–23ನೇ ಹಣಕಾಸು ವರ್ಷದ ಏಪ್ರಿಲ್‌–ಸೆಪ್ಟೆಂಬರ್‌ ಅವಧಿಯಲ್ಲಿ 1.01 ಕೋಟಿ ವಾಹನಗಳು ಮಾರಾಟ ಆಗಿದ್ದವು. 2023–24ನೇ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಮಾರಾಟವು 1.10 ಕೋಟಿಗೆ ಏರಿಕೆ ಕಂಡಿದೆ ಎಂದು ಅದು ಮಾಹಿತಿ ನೀಡಿದೆ.

ಹಣಕಾಸು ವರ್ಷದ ಮೊದಲಾರ್ಧದಲ್ಲಿ ವಾಹನ ಮಾರಾಟ ಚೇತರಿಕೆ ಕಂಡಿದೆ. ಎಲ್ಲಾ ವಿಭಾಗಗಳಲ್ಲಿಯೂ ಮಾರಾಟ ಹೆಚ್ಚಾಗಿದೆ. ಮುಖ್ಯವಾಗಿ ತ್ರಿಚಕ್ರ ವಾಹನಗಳ ಮಾರಾಟದಲ್ಲಿ ಉತ್ತಮ ಬೆಳವಣಿಗೆ ಕಂಡುಬಂದಿದೆ ಎಂದು ಒಕ್ಕೂಟದ ಅಧ್ಯಕ್ಷ ಮನಿಷ್‌ ರಾಜ್‌ ಸಿಂಘಾನಿಯಾ ತಿಳಿಸಿದ್ದಾರೆ.

ತ್ರಿಚ್ರಕ ವಾಹನ ಮಾರಾಟ ಶೇ 66ರಷ್ಟು, ಪ್ರಯಾಣಿಕ ವಾಹನ ಮಾರಾಟ ಶೇ 6, ದ್ವಿಚಕ್ರ (ಶೇ 7), ವಾಣಿಜ್ಯ ವಾಹನ (ಶೇ 3) ಮತ್ತು ಟ್ರ್ಯಾಕ್ಟರ್‌ ಮಾರಾಟ ಶೇ 14ರಷ್ಟು ಏರಿಕೆ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT