ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುತಿ ಸುಜುಕಿ ನಿವ್ವಳ ಲಾಭ ₹2,112 ಕೋಟಿ

Last Updated 28 ಅಕ್ಟೋಬರ್ 2022, 10:47 IST
ಅಕ್ಷರ ಗಾತ್ರ

ನವದೆಹಲಿ: ಮಾರುತಿ ಸುಜುಕಿ ಇಂಡಿಯಾ ಕಂಪನಿಯು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹2,112 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಲಾಭದಲ್ಲಿ ನಾಲ್ಕುಪಟ್ಟು ಹೆಚ್ಚಳ ಕಂಡುಬಂದಿದೆ.

ಹಿಂದಿನ ಹಣಕಾಸು ವರ್ಷದ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹ 487 ಕೋಟಿ ನಿವ್ವಳ ಲಾಭ ಆಗಿತ್ತು ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ಕಾರ್ಯಾಚರಣಾ ವರಮಾನವು ₹20,550 ಕೋಟಿಯಿಂದ ₹29,942 ಕೋಟಿಗೆ ಶೇ 46ರಷ್ಟು ಏರಿಕೆ ಆಗಿದೆ. ಮಾರಾಟವು ದಾಖಲೆ ಪ್ರಮಾಣದಲ್ಲಿ ಹೆಚ್ಚಳ ಆಗಿರುವುದೇ ಇದಕ್ಕೆ ಕಾರಣ ಎಂದು ಕಂಪನಿ ತಿಳಿಸಿದೆ. ತ್ರೈಮಾಸಿಕದಲ್ಲಿ ಕಂಪನಿಯ ಒಟ್ಟು 5.17 ಲಕ್ಷ ವಾಹನಗಳನ್ನು ಮಾರಾಟ ಮಾಡಿದ್ದು, ತ್ರೈಮಾಸಿಕವೊಂದರಲ್ಲೇ ಆಗಿರುವ ಗರಿಷ್ಠ ಮಾರಾಟ ಇದಾಗಿದೆ. ವಾಹನಗಳ ದೇಶಿ ಮಾರಾಟ 4.54 ಲಕ್ಷ, ರಫ್ತು 63,195ಕ್ಕೆ ತಲುಪಿದೆ ಎಂದು ಕಂಪನಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT