ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅದಾನಿ’ ಸಮಸ್ಯೆ ಅವರ ಕಂಪನಿಗೆ ಸಂಬಂಧಿಸಿದ್ದು: ನಿರ್ಮಲಾ ಸೀತಾರಾಮನ್‌

Last Updated 5 ಫೆಬ್ರುವರಿ 2023, 19:01 IST
ಅಕ್ಷರ ಗಾತ್ರ

ನವದೆಹಲಿ: ಹಿಂಡನ್‌ಬರ್ಗ್‌ ರಿಸರ್ಚ್‌ ಸಂಸ್ಥೆಯ ವರದಿಯ ನಂತರ ಅದಾನಿ ಸಮೂಹದ ಷೇರುಗಳಲ್ಲಿ ಆಗಿರುವ ಕುಸಿತವು ನಿರ್ದಿಷ್ಟವಾಗಿ ಕಂಪನಿಯ ಸಮಸ್ಯೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭಾನುವಾರ ಹೇಳಿದ್ದಾರೆ.

ಷೇರುಪೇಟೆಯನ್ನು ಸ್ಥಿರವಾಗಿ ಇರುವಂತೆ ಮಾಡಲು ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ) ಮತ್ತು ಆರ್‌ಬಿಐ ಸದಾ ಸಿದ್ಧವಾಗಿರಬೇಕು ಎಂದು ನಿರ್ಮಲಾ ಹೇಳಿದ್ದಾರೆ.

‘ಮಾರುಕಟ್ಟೆಯಲ್ಲಿ ಆಗಾಗ್ಗೆ ಅನಿರೀಕ್ಷಿತ ಚಲನೆ ಕಂಡುಬರುತ್ತದೆ. ಅದು ಸಣ್ಣ ಅಥವಾ ದೊಡ್ಡ ಮಟ್ಟದಲ್ಲಿ ಇರಬಹುದು. ಆದರೆ, ಇಂತಹ ಪ‍ರಿಸ್ಥಿತಿಗಳನ್ನು ನಿರ್ವಹಿಸಲಾಗುತ್ತದೆ. ನಮ್ಮ ನಿಯಂತ್ರಣ ಸಂಸ್ಥೆಗಳು ಈ ವಿಷಯವನ್ನು ಪರಿಶೀಲಿಸುತ್ತಿರುವುದಾಗಿ ನಂಬಿದ್ದೇನೆ’ ಎಂದು ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಚಿವೆ ನಿರ್ಮಲಾ ತಿಳಿಸಿದ್ದಾರೆ.

ಬ್ಯಾಂಕ್‌ಗಳು ಮತ್ತು ವಿಮಾ ಕಂಪನಿಗಳು ಯಾವುದೇ ಒಂದು ಕಂಪನಿಯಲ್ಲಿ ಅತಿಯಾಗಿ ಹೂಡಿಕೆ ಮಾಡಿಲ್ಲ. ಅದಾನಿ ಸಮೂಹಕ್ಕೆ ನೀಡಿರುವ ಸಾಲ ಮತ್ತು ಬಂಡವಾಳದ
ಕುರಿತು ಬ್ಯಾಂಕ್‌ಗಳು ಮತ್ತು ವಿಮಾ ಕಂಪನಿಗಳೇ ಸಾರ್ವಜನಿಕವಾಗಿ ಮಾಹಿತಿ ಬಹಿರಂಗಪಡಿಸುತ್ತಿವೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT