ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹20 ಲಕ್ಷ ಕೋಟಿ ದಾಟಿದ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ

Published 13 ಫೆಬ್ರುವರಿ 2024, 15:46 IST
Last Updated 13 ಫೆಬ್ರುವರಿ 2024, 15:46 IST
ಅಕ್ಷರ ಗಾತ್ರ

ನವದೆಹಲಿ : ಉದ್ಯಮಿ ಮುಕೇಶ್‌ ಅಂಬಾನಿ ಒಡೆತನದ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಮಾರುಕಟ್ಟೆ ಮೌಲ್ಯವು (ಎಂ–ಕ್ಯಾಪ್‌) ₹20 ಲಕ್ಷ ಕೋಟಿ ದಾಟಿದೆ.

ಮಂಗಳವಾರ ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ನಲ್ಲಿ ಷೇರಿನ ಮೌಲ್ಯ ಶೇ 1.88 ಮತ್ತು ನಿಫ್ಟಿಯಲ್ಲಿ ಶೇ 1.89ರಷ್ಟು ಏರಿಕೆಯಾಗಿದೆ. 

ಪೇಟಿಎಂ ಷೇರು ಇಳಿಕೆ:

ಪೇಟಿಎಂನ ಮಾತೃಸಂಸ್ಥೆಯಾದ ಒನ್‌97 ಕಮ್ಯುನಿಕೇಷನ್‌ ಲಿಮಿಟೆಡ್‌ನ ಷೇರುಗಳ ಮೌಲ್ಯ  ಶೇ 10ರಷ್ಟು ಇಳಿಕೆ ಆಗಿದೆ. ಬಿಎಸ್‌ಇ ಮತ್ತು ಎನ್‌ಎಸ್‌ಇಯಲ್ಲಿ ಷೇರಿನ ಬೆಲೆ ಕ್ರಮವಾಗಿ ₹380 ಮತ್ತು ₹380.35ಕ್ಕೆ ತಲುಪಿದೆ. 

ಷೇರು ಸೂಚ್ಯಂಕಗಳು ಏರಿಕೆ:

ಬ್ಯಾಂಕಿಂಗ್‌, ಹಣಕಾಸು ಸೇವೆ ಮತ್ತು ಐ.ಟಿ ವಲಯದ ಷೇರುಗಳ ಖರೀದಿ ಹೆಚ್ಚಳದಿಂದಾಗಿ ಷೇರು ಸೂಚ್ಯಂಕಗಳು ಏರಿಕೆ ಕಂಡಿವೆ. ಸೆನ್ಸೆಕ್ಸ್‌ 482 ಅಂಶ ಏರಿಕೆಯಾಗಿ 71,555ರಲ್ಲಿ ಸ್ಥಿರಗೊಂಡಿತು. ನಿಫ್ಟಿ 127 ಅಂಶ ಹೆಚ್ಚಳವಾಗಿ 21,743ರಲ್ಲಿ ವಹಿವಾಟನ್ನು ಮುಕ್ತಾಯಗೊಳಿಸಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT