ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹19 ಲಕ್ಷ ಕೋಟಿ ದಾಟಿದ ರಿಲಯನ್ಸ್ ಮಾರುಕಟ್ಟೆ ಮೌಲ್ಯ

Last Updated 27 ಏಪ್ರಿಲ್ 2022, 12:34 IST
ಅಕ್ಷರ ಗಾತ್ರ

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಮಾರುಕಟ್ಟೆ ಮೌಲ್ಯವು ಬುಧವಾರ ₹ 19 ಲಕ್ಷ ಕೋಟಿಯ ಗಡಿಯನ್ನು ದಾಟಿತ್ತು. ಈ ಮಟ್ಟವನ್ನು ದಾಟಿದ ಭಾರತದ ಮೊದಲ ಕಂಪನಿ ರಿಲಯನ್ಸ್.

ಬುಧವಾರದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆಯಲ್ಲಿ ಕಂಪನಿಯ ಷೇರು ಮೌಲ್ಯವು ₹ 2,827.10ಕ್ಕೆ ತಲುಪಿತ್ತು. ದಿನದ ಕೊನೆಯಲ್ಲಿ ಅದು ₹ 2,777.90ಕ್ಕೆ ತಲುಪಿತು.

ಷೇರು ಮೌಲ್ಯವು ಹೆಚ್ಚಳ ಆಗಿದ್ದಾಗ ಕಂಪನಿಯ ಮಾರುಕಟ್ಟೆ ಬಂಡವಾಳದ ಮೌಲ್ಯವು ₹ 19.12 ಲಕ್ಷ ಕೋಟಿಗೆ ತಲುಪಿತ್ತು. ದಿನದ ಕೊನೆಯಲ್ಲಿ ಅದು ₹ 18.79 ಲಕ್ಷ ಕೋಟಿಗೆ ಇಳಿಯಿತು. ಕಂಪನಿಯ ಮಾರುಕಟ್ಟೆ ಬಂಡವಾಳ ಮೌಲ್ಯವು ಮಾರ್ಚ್‌ನಲ್ಲಿ ₹ 18 ಲಕ್ಷ ಕೋಟಿಯ ಗಡಿ ದಾಟಿತ್ತು.

ಕಂಪನಿಯ ಷೇರು ಮೌಲ್ಯವು ಈ ವರ್ಷದಲ್ಲಿ ಶೇ 17.30ರಷ್ಟು ಹೆಚ್ಚಳ ಕಂಡಿದೆ.

ಈ ನಡುವೆ, ರಿಲಯನ್ಸ್ ಕಂಪನಿಯು ಸಂಯುಕ್ತ ಅರಬ್ ಸಂಸ್ಥಾನಗಳ (ಯುಎಇ) ತಾಜಿಜ್ ಕಂಪನಿಯ ಜೊತೆ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಸಾಂಪ್ರದಾಯಿಕ ಹಾಗೂ ಅಸಾಂಪ್ರದಾಯಿಕ ಸಂಪನ್ಮೂಲಗಳನ್ನು ಅರಸುವಲ್ಲಿ ಜಂಟಿಯಾಗಿ ಕೆಲಸ ಮಾಡಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT