ಬುಧವಾರ, ಸೆಪ್ಟೆಂಬರ್ 22, 2021
22 °C

ಕೋವಿಡ್‌ನಿಂದ ವಹಿವಾಟಿಗೆ ಪೆಟ್ಟು; ರಿಲಯನ್ಸ್ ಲಾಭ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್‌ ಲಿಮಿಟೆಡ್‌ನ ಜೂನ್‌ ತ್ರೈಮಾಸಿಕದ ಲಾಭದಲ್ಲಿ ಶೇಕಡ 7ರಷ್ಟು ಇಳಿಕೆ ಆಗಿದೆ. ಕೋವಿಡ್ ಎರಡನೆಯ ಅಲೆಯ ಕಾರಣದಿಂದಾಗಿ ಉದ್ಯಮ ಸಮೂಹದ ಚಿಲ್ಲರೆ ವ್ಯಾಪಾರ ವಹಿವಾಟಿಗೆ ಏಟು ಬಿದ್ದ ಕಾರಣದಿಂದಾಗಿ ಲಾಭದಲ್ಲಿ ತುಸು ಇಳಿಕೆ ಕಂಡುಬಂದಿದೆ.

ಈ ವರ್ಷದ ಏಪ್ರಿಲ್–ಜೂನ್‌ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು ₹ 12,273 ಕೋಟಿ ಲಾಭ ದಾಖಲಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹ 13,233 ಕೋಟಿ ಲಾಭ ಕಂಡಿತ್ತು. ಈ ವರ್ಷದ ಜೂನ್ ತ್ರೈಮಾಸಿಕದಲ್ಲಿ ಆದಾಯವು ₹ 1.44 ಲಕ್ಷ ಕೋಟಿ ಎಂದು ಕಂಪನಿಯು ಷೇರು ಮಾರುಕಟ್ಟೆಗೆ ಮಾಹಿತಿ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.