ಬೆಂಗಳೂರು:ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರರೆಪೊ ದರ (ಆರ್‌ಬಿಐ ಬ್ಯಾಂಕ್‌ಗಳಿಗೆ ನೀಡುವ ಸಾಲದ ಮೇಲಿನ ಬಡ್ಡಿದರ) ಪ್ರಕಟಿಸಿದ್ದು, ಹಿಂದಿನ ದರದಲ್ಲಿ 75 ಅಂಶಗಳನ್ನು ಕಡಿತಗೊಳಿಸುವ ಮೂಲಕಶೇ 4.4 ನಿಗದಿ ಪಡಿಸಿದೆ.

ರಿವರ್ಸ್ ರೆಪೊ ದರ 90 ಅಂಶ ಕಡಿತಗೊಳಿಸಿದ್ದು, ಶೇ 4ರಷ್ಟು ನಿಗದಿ ಪಡಿಸಿರುವುದಾಗಿ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್. ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು (ಎಂಪಿಸಿ) ಸಭೆ ನಡೆಸಿ ಈ ನಿರ್ಧಾರ ಪ್ರಕಟಿಸಲಾಗಿದೆ.

ಕಳೆದ ತಿಂಗಳು ರೆಪೊ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಶೇ 5.15 ಮುಂದುವರಿಸಲಾಗಿತ್ತು.

ದೀರ್ಘಾವಧಿ ಸಾಲಗಳ ಮಾಸಿಕ ಕಂತು ಪಾವತಿಯನ್ನು 3 ತಿಂಗಳ ವರೆಗೂ ಮುಂದೂಡುವ ಅವಕಾಶ ಕಲ್ಪಿಸಿದೆ. ಎಲ್ಲ ಬ್ಯಾಂಕ್‌ಗಳು ಇಎಂಐ ಪಾವತಿಗೆ 3 ತಿಂಗಳ ಅವಕಾಶ ನೀಡಲು ಅನುಮತಿ ನೀಡಲಾಗಿದೆ ಎಂದು ಶಕ್ತಿಕಾಂತ ದಾಸ್ ತಿಳಿಸಿದರು.

ನಗದು ಮೀಸಲು ಅನುಪಾತವನ್ನು (ಸಿಆರ್‌ಆರ್) ಆರ್‌ಬಿಐ 100 ಅಂಶ ಕಡಿತಗೊಳಿಸುವ ಮೂಲಕ ಶೇ 3 ನಿಗದಿ ಪಡಿಸಿದೆ. ಇದೇ 28ರಿಂದ ಇದು ಅನ್ವಯವಾಗಲಿದ್ದು, ಮುಂದಿನ 1 ವರ್ಷಗಳ ವರೆಗೂ ಮುಂದುವರಿಯಲಿದೆ. ಇದರಿಂದಾಗಿ ಬ್ಯಾಂಕಿಂಗ್ ವಲಯದಲ್ಲಿ ₹1.37 ಲಕ್ಷ ಕೋಟಿ ಹಣದ ಹರಿವು ಇರಲಿದೆ ಎಂದಿದ್ದಾರೆ.

ಯುದ್ಧೋಪಾದಿಯಲ್ಲಿ ಕೊರೊನಾ ವೈರಸ್ ಸೊಂಕು ತಡೆಗೆ ಅಗತ್ಯ ಕ್ರಮಗಳನ್ನು ಅನುಸರಿಬೇಕಾಗಿದೆ. ಹಣದ ಹರಿವು ಇರುವಂತೆ ಆರ್‌ಬಿಐ ಗಮನಿಸುತ್ತಿದೆ. ಕೋವಿಡ್–19 ತಡೆಗಾಗಿ ಜಗತ್ತಿನಾದ್ಯಂತ ಲಾಕ್‌ಡೌನ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆಯಿಂದಾಗಿ ಜಾಗತಿಕ ಆರ್ಥಿಕ ಚಟುವಟಿಕೆಗಳು ತಟಸ್ಥಗೊಂಡಿವೆ. 2020ರಲ್ಲಿ ನಿರೀಕ್ಷಿಸಲಾಗಿದ್ದ ಜಾಗತಿಕ ಆರ್ಥಿಕತೆಯ ಚೇತರಿಕೆಗೆ ಎರವಾಗಿದೆ ಎಂದು ಆರ್‌ಬಿಐ ಗವರ್ನರ್ ಹೇಳಿದ್ದಾರೆ.

ಸದ್ಯದ ಪರಿಸ್ಥಿತಿಯು ಕೊರೊನಾ ಸೋಂಕು ವ್ಯಾಪ್ತಿ, ಅವಧಿಯ ಬಗ್ಗೆ ಅನಿಶ್ಚಿತತೆ ಮೂಡಿಸಿದೆ. ಇದರಿಂದಾಗಿ ಜಗತ್ತಿನ ಬಹುತೇಕ ಆರ್ಥಿಕತೆಗಳು ಹಿಂಜರಿತಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚಿದೆ. ಬೆಳೆ, ಆಹಾರ ಪಾದಾರ್ಥಗಳ ಉತ್ಪಾದನೆ ಪ್ರಮಾಣ ಹೆಚ್ಚಳವಾಗಿದ್ದು, ಬೆಲೆ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.