ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಲ್ಲರೆ ಹಣದುಬ್ಬರ ಅಲ್ಪ ಏರಿಕೆ

Last Updated 12 ಅಕ್ಟೋಬರ್ 2018, 18:20 IST
ಅಕ್ಷರ ಗಾತ್ರ

ನವದೆಹಲಿ: ಇಂಧನ ಮತ್ತು ಆಹಾರ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಆಗಿರುವುದರಿಂದ ಆಗಸ್ಟ್‌ನಲ್ಲಿ ಚಿಲ್ಲರೆ ಹಣದುಬ್ಬರ ಅಲ್ಪ ಏರಿಕೆ ಕಂಡಿದೆ.

ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರ ಆಗಸ್ಟ್‌ನಲ್ಲಿ ಶೇ 3.69ರಷ್ಟಿತ್ತು. ಸೆಪ್ಟೆಂಬರ್‌ಗೆ ಶೇ 3.77ಕ್ಕೆ ಏರಿಕೆಯಾಗಿದೆ.

ಚಿಲ್ಲರೆ ಹಣದುಬ್ಬರವನ್ನು ಶೇ 4ರಲ್ಲಿ ನಿಯಂತ್ರಿಸುವ ಗುರಿಯನ್ನು ಆರ್‌ಬಿಐ ಹೊಂದಿದೆ. ಹೀಗಾಗಿ ಅದಕ್ಕಿಂತಲೂ ಕಡಿಮೆಯೇ ಇದೆ.

ಒರಟುಧಾನ್ಯ, ಮಾಂಸ, ಮೀನು, ಮೊಟ್ಟೆ ಮತ್ತು ಹಾಲಿನ ಉತ್ಪನ್ನಗಳ ಬೆಲೆಯಲ್ಲಿ ಏರಿಕೆಯಾಗಿದೆ.ಆಹಾರ ಉತ್ಪನ್ನಗಳ ಒಟ್ಟಾರೆ ಹಣದುಬ್ಬರ ಶೇ 0.29 ರಿಂದ ಶೇ 0.51ಕ್ಕೆ ಏರಿಕೆಯಾಗಿದೆ. ಇಂಧನ ಮತ್ತು ವಿದ್ಯುತ್‌ ದರಗಳು ಶೇ 8.47ರಷ್ಟು ಏರಿಕೆಯಾಗಿದೆ.

ಕೈಗಾರಿಕಾ ಪ್ರಗತಿ: ಆಗಸ್ಟ್‌ ತಿಂಗಳ ಕೈಗಾರಿಕಾ ಪ್ರಗತಿ ಸೂಚ್ಯಂಕವು ಮೂರು ತಿಂಗಳ ಕನಿಷ್ಠ ಮಟ್ಟವಾದ 4.3ಕ್ಕೆ ಇಳಿಕೆಯಾಗಿದೆ.

ಹಿಂದಿನ ವರ್ಷದ ಆಗಸ್ಟ್‌ನಲ್ಲಿ ಶೇ 4.8ರಷ್ಟು ಪ್ರಗತಿ ಕಂಡಿತ್ತು ಎಂದು ಕೇಂದ್ರೀಯ ಸಾಂಖ್ಯಿಕ ಕಚೇರಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT