ಮಂಗಳವಾರ, ಮಾರ್ಚ್ 31, 2020
19 °C

ಚಿಲ್ಲರೆ ಹಣದುಬ್ಬರ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಫೆಬ್ರುವರಿಯಲ್ಲಿ ಚಿಲ್ಲರೆ ಹಣದುಬ್ಬರ ಶೇ 6.58ಕ್ಕೆ ಇಳಿದಿದೆ.

ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರ ಜನವರಿಯಲ್ಲಿ ಶೇ 7.59ರಷ್ಟು ಗರಿಷ್ಠ ಮಟ್ಟದಲ್ಲಿತ್ತು.

ತರಕಾರಿ ಮತ್ತು ಆಹಾರ ಉತ್ಪನ್ನಗಳ ಬೆಲೆಯಲ್ಲಿ ಇಳಿಕೆ ಆಗಿರುವುದರಿಂದ ಚಿಲ್ಲರೆ ಹಣದುಬ್ಬರದಲ್ಲಿ 6 ತಿಂಗಳಲ್ಲಿ ಮೊದಲ ಬಾರಿಗೆ ಅಲ್ಪ ಇಳಿಕೆ ಕಂಡುಬಂದಿದೆ.

2019ರ ಆಗಸ್ಟ್‌ನಿಂದಲೂ ಚಿಲ್ಲರೆ ಹಣದುಬ್ಬರ ಏರುಮುಖವಾಗಿತ್ತು.

ಐಐಪಿ ಏರಿಕೆ: ಜನವರಿ ತಿಂಗಳ ಕೈಗಾರಿಕಾ ಉತ್ಪಾದನೆ ಶೇ 2ಕ್ಕೆ ಅಲ್ಪ ಏರಿಕೆ ಕಂಡಿದೆ.

ಕೈಗಾರಿಕಾ ಉತ್ಪಾದನಾ ಸೂಚ್ಯಂಕದ (ಐಐಪಿ) ಆಧಾರದ ಮೇಲೆ ಲೆಕ್ಕ ಹಾಕುವ ಕೈಗಾರಿಕಾ ಬೆಳವಣಿಗೆಯು 2019ರ ಜನವರಿಯಲ್ಲಿ ಶೇ 1.6ರಷ್ಟಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು