ಮಂಗಳವಾರ, ಸೆಪ್ಟೆಂಬರ್ 28, 2021
24 °C

ಚಿಲ್ಲರೆ ಹಣದುಬ್ಬರ ತುಸು ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಆಹಾರ ವಸ್ತುಗಳ ಬೆಲೆ ತಗ್ಗಿದ ಕಾರಣದಿಂದಾಗಿ ಚಿಲ್ಲರೆ ಹಣದುಬ್ಬರ ಪ್ರಮಾಣವು ಆಗಸ್ಟ್‌ ತಿಂಗಳಿನಲ್ಲಿ ಶೇಕಡ 5.3ಕ್ಕೆ ಇಳಿಕೆ ಕಂಡಿದೆ. ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಚಿಲ್ಲರೆ ಹಣದುಬ್ಬರ ಪ್ರಮಾಣವು ಜುಲೈನಲ್ಲಿ ಶೇ 5.59ರಷ್ಟು ಇತ್ತು.

ಹಿಂದಿನ ವರ್ಷದ ಆಗಸ್ಟ್‌ನಲ್ಲಿ ಇದು ಶೇ 6.69ರ ಮಟ್ಟದಲ್ಲಿತ್ತು. ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಬಿಡುಗಡೆ ಮಾಡಿರುವ ಅಂಕಿ–ಅಂಶಗಳ ಪ್ರಕಾರ, ಆಗಸ್ಟ್‌ನಲ್ಲಿ ಆಹಾರ ವಸ್ತುಗಳ ಹಣದುಬ್ಬರ ಪ್ರಮಾಣವು ಶೇ 3.11ರಷ್ಟು ಇತ್ತು. ಇದು ಜುಲೈನಲ್ಲಿ ಶೇ 3.96 ಆಗಿತ್ತು.

ಆಗಸ್ಟ್‌ನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ಪ್ರಮುಖ ಬಡ್ಡಿ ದರಗಳಲ್ಲಿ ಯಾವುದೇ ಬದಲಾವಣೆ ಮಾಡದಿರಲು ತೀರ್ಮಾನಿಸಿತ್ತು. ಆರ್‌ಬಿಐ ಬಡ್ಡಿ ದರದ ವಿಚಾರದಲ್ಲಿ ತೀರ್ಮಾನ ಕೈಗೊಳ್ಳುವಾಗ ಸಿಪಿಐ ಮೇಲೆ ಗಮನ ನೀಡುತ್ತದೆ.

2021–22ರಲ್ಲಿ ಹಣದುಬ್ಬರ ಪ್ರಮಾಣವು ಶೇ 5.7ರಷ್ಟು ಇರುತ್ತದೆ ಎಂದು ಆರ್‌ಬಿಐ ಅಂದಾಜು ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು