ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಲ್ಲರೆ ಹಣದುಬ್ಬರ ದರವು ಮೇ ತಿಂಗಳಿನಲ್ಲಿ ಶೇಕಡ 7.04ಕ್ಕೆ ಇಳಿಕೆ

Last Updated 13 ಜೂನ್ 2022, 20:21 IST
ಅಕ್ಷರ ಗಾತ್ರ

ನವದೆಹಲಿ: ಏಪ್ರಿಲ್‌ನಲ್ಲಿ ಶೇಕಡ 7.79ರಷ್ಟಿದ್ದ ಚಿಲ್ಲರೆ ಹಣದುಬ್ಬರ ದರವು ಮೇ ತಿಂಗಳಿನಲ್ಲಿ ಶೇಕಡ 7.04ಕ್ಕೆ ಇಳಿಕೆಯಾಗಿದೆ. ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ಎಕ್ಸೈಸ್ ಸುಂಕ ತಗ್ಗಿಸಿದ್ದು ಹಾಗೂ ಭಾರತೀಯ ರಿಸರ್ವ್‌ ಬ್ಯಾಂಕ್ (ಆರ್‌ಬಿಐ) ರೆಪೊ ದರವನ್ನು ಹೆಚ್ಚಿಸಿದ್ದು ಹಣದುಬ್ಬರ ಪ್ರಮಾಣ ತುಸು ಕಡಿಮೆ ಆಗಲು ನೆರವಾಗಿವೆ.

ಹೀಗಿದ್ದರೂ, ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಚಿಲ್ಲರೆ ಹಣದುಬ್ಬರ ದರವು ಆರ್‌ಬಿಐ ನಿಗದಿ ಮಾಡಿಕೊಂಡಿರುವ ಗರಿಷ್ಠ ಮಿತಿಗಿಂತ (ಶೇ 6) ಹೆಚ್ಚಿನ ಮಟ್ಟದಲ್ಲಿಯೇ ಉಳಿದಿದೆ. ಹಣದುಬ್ಬರವು ಸತತ ಐದು ತಿಂಗಳುಗಳಿಂದ ಶೇ 6ಕ್ಕಿಂತ ಹೆಚ್ಚಿನಪ್ರಮಾಣದಲ್ಲಿದೆ. ಹೀಗಾಗಿ, ಆಗಸ್ಟ್‌ ತಿಂಗಳಲ್ಲಿ ಆರ್‌ಬಿಐ ರೆಪೊ ದರವನ್ನು ಮತ್ತೊಂದು ಬಾರಿ ಹೆಚ್ಚಿಸುವ ನಿರೀಕ್ಷೆ ಇದೆ.

ಏಪ್ರಿಲ್‌ನಲ್ಲಿ ಹಣದುಬ್ಬರ ಎಂಟು ವರ್ಷಗಳ ಗರಿಷ್ಠ ಮಟ್ಟದಲ್ಲಿ ಇತ್ತು. ಆಹಾರ ವಸ್ತುಗಳ ಹಣದುಬ್ಬರ ಪ್ರಮಾಣವು ಮೇ ತಿಂಗಳಲ್ಲಿ ಶೇ 7.97ಕ್ಕೆ ಇಳಿಕೆಯಾಗಿದೆ. ಇದು ಏಪ್ರಿಲ್‌ನಲ್ಲಿ ಶೇ 8.31ರಷ್ಟು ಇತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಹಣದುಬ್ಬರ ದರವು ಶೇ 5.7ರಷ್ಟು ಇರಲಿದೆ ಎಂದು ಈ ಮೊದಲು ಅಂದಾಜು ಮಾಡಿದ್ದ ಆರ್‌ಬಿಐ, ಈಗ ಅಂದಾಜನ್ನುಶೇ 6.7ಕ್ಕೆ ಹೆಚ್ಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT