ಶುಕ್ರವಾರ, ಸೆಪ್ಟೆಂಬರ್ 24, 2021
26 °C

ಜುಲೈನಲ್ಲಿ ಶೇ 5.59ಕ್ಕೆ ತಗ್ಗಿದ ಚಿಲ್ಲರೆ ಹಣದುಬ್ಬರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಆಹಾರ ಉತ್ಪನ್ನಗಳ ಬೆಲೆ ಇಳಿಕೆ ಆಗಿರುವುದರಿಂದ ಜುಲೈನಲ್ಲಿ ಚಿಲ್ಲರೆ ಹಣದುಬ್ಬರವು ಶೇ 5.59ಕ್ಕೆ ಇಳಿಕೆ ಆಗಿದೆ.

ಗ್ರಾಹಕ ದರ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರವು ಜೂನ್‌ನಲ್ಲಿ ಶೇ 6.26ರಷ್ಟು ಇತ್ತು. ಹಿಂದಿನ ವರ್ಷದ ಜುಲೈನಲ್ಲಿಯೂ ಶೇ 6.73ರಷ್ಟು ಗರಿಷ್ಠ ಮಟ್ಟದಲ್ಲಿತ್ತು.

ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಆಹಾರ ಹಣದುಬ್ಬರವು ಜೂನ್‌ನಲ್ಲಿ ಶೇ 5.15ರಷ್ಟು ಇದ್ದಿದ್ದು ಜುಲೈನಲ್ಲಿ ಶೇ 3.96ಕ್ಕೆ ಇಳಿಕೆ ಕಂಡಿದೆ.

ಹಣದುಬ್ಬರವನ್ನು ಶೇ 4ರ ಮಟ್ಟದಲ್ಲಿ (ಇದರಲ್ಲಿ ಶೇ 2ರಷ್ಟು ಹೆಚ್ಚು ಅಥವಾ ಶೇ 2ರಷ್ಟು ಕಡಿಮೆ ಆಗಬಹುದು) ಇರಿಸುವ ಗುರಿಯನ್ನು ಕೇಂದ್ರ ಸರ್ಕಾರವು ಆರ್‌ಬಿಐಗೆ ನೀಡಿದೆ. 2021–22ನೇ ಹಣಕಾಸು ವರ್ಷದಲ್ಲಿ ಚಿಲ್ಲರೆ ಹಣದುಬ್ಬರವು ಶೇ 5.7ರ ಮಟ್ಟದಲ್ಲಿ ಇರಲಿದೆ ಎಂದು ಆರ್‌ಬಿಐ ತನ್ನ ಈಚಿನ ಹಣಕಾಸು ನೀತಿ ಪರಾಮರ್ಶೆಯಲ್ಲಿ ಅಂದಾಜು ಮಾಡಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು