ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಚಿಲ್ಲರೆ ಹಣದುಬ್ಬರ ಶೇ 4.87ಕ್ಕೆ ಇಳಿಕೆ

Published 13 ನವೆಂಬರ್ 2023, 16:01 IST
Last Updated 13 ನವೆಂಬರ್ 2023, 16:01 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಚಿಲ್ಲರೆ ಹಣದುಬ್ಬರವು ಅಕ್ಟೋಬರ್‌ನಲ್ಲಿ ನಾಲ್ಕು ತಿಂಗಳ ಕನಿಷ್ಠ ಮಟ್ಟವಾದ ಶೇ 4.87ಕ್ಕೆ ಇಳಿಕೆ ಕಂಡಿದೆ. ಆಹಾರ ವಸ್ತುಗಳ ಧಾರಣೆ ಇಳಿಕೆಯೇ ಇದಕ್ಕೆ ಮೂಲ ಕಾರಣವಾಗಿದೆ ಎಂದು ಸರ್ಕಾರ ಹೇಳಿದೆ.

ಗ್ರಾಹಕರ ದರ ಸೂಚ್ಯಂಕ (ಸಿಪಿಐ) ಆಧಾರಿತ ಈ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಮೂರು ತಿಂಗಳ ಕನಿಷ್ಠ ಮಟ್ಟವಾದ ಶೇ 5.02ಕ್ಕೆ ಇಳಿಕೆ ಕಂಡಿತ್ತು. ಜೂನ್‌ನಲ್ಲಿ ಶೇ 4.87ರಷ್ಟು ಕನಿಷ್ಠ ಮಟ್ಟದಲ್ಲಿ ದಾಖಲಾಗಿತ್ತು.

2022–23ನೇ ಆರ್ಥಿಕ ವರ್ಷದಲ್ಲಿ ಗ್ರಾಹಕರ ದರ ಸೂಚ್ಯಂಕ ಆಧಾರಿತ ಹಣದುಬ್ಬರವು ಶೇ 6.7ಕ್ಕೆ ತಗ್ಗಿತ್ತು. ಅಕ್ಟೋಬರ್‌ನಲ್ಲಿ ನಡೆದ ಭಾರತೀಯ ರಿಸರ್ವ್‌ ಬ್ಯಾಂಕ್‌ನ (ಆರ್‌ಬಿಐ) ಹಣಕಾಸು ನೀತಿ ಸಮಿತಿ ಸಭೆಯಲ್ಲಿ 2023–24ನೇ ಸಾಲಿಗೆ ಇದನ್ನು ಶೇ 5.4ಕ್ಕೆ ಮಿತಿಗೊಳಿಸಲು ತೀರ್ಮಾನಿಸಲಾಗಿತ್ತು.

ಚಿಲ್ಲರೆ ಹಣದುಬ್ಬರ ಪ್ರಮಾಣವನ್ನು ಶೇ 4ರಲ್ಲಿ ನಿಯಂತ್ರಿಸುವತ್ತ ಗಮನ ಹರಿಸುವಂತೆ ಕೇಂದ್ರ ಸರ್ಕಾರವು ಆರ್‌ಬಿಐಗೆ ಸೂಚಿಸಿದೆ. ಎರಡು ತಿಂಗಳಿಗೊಮ್ಮೆ ನಡೆಯುವ ಆರ್‌ಬಿಐನ ಹಣಕಾಸು ನೀತಿ ಸಮಿತಿಯ ಸಭೆಯಲ್ಲಿ ಹಣದುಬ್ಬರದ ನಿಯಂತ್ರಣ ಕುರಿತು ಚರ್ಚಿಸಿ ನಿರ್ಧರಿಸಲಾಗುತ್ತದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT