ಮಂಗಳವಾರ, ನವೆಂಬರ್ 24, 2020
22 °C

ಚಿಲ್ಲರೆ ಹಣದುಬ್ಬರ ಶೇ 7.61ಕ್ಕೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಆಹಾರ ಉತ್ಪನ್ನಗಳ ಬೆಲೆಯಲ್ಲಿ ಹೆಚ್ಚಳ ಆಗಿರುವುದರಿಂದ ಚಿಲ್ಲರೆ ಹಣದುಬ್ಬರ ದರ ಅಕ್ಟೋಬರ್‌ನಲ್ಲಿ ಶೇಕಡ 7.61ಕ್ಕೆ ಏರಿಕೆಯಾಗಿದೆ. ಇದು ಆರ್‌ಬಿಐ ನಿಗದಿ ಮಾಡಿಕೊಂಡ ಹಿತಕರ ಮಟ್ಟಕ್ಕಿಂತಲೂ ಹೆಚ್ಚಿನದ್ದಾಗಿದೆ.

ಗ್ರಾಹಕ ದರ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರ ಈ ವರ್ಷದ ಸೆಪ್ಟೆಂಬರ್‌ನಲ್ಲಿ ಶೇ 7.27ರಷ್ಟಿತ್ತು. 2019ರ ಅಕ್ಟೋಬರ್‌ನಲ್ಲಿ ಶೇ 4.62ರಷ್ಟಿತ್ತು. ಆಹಾರ ಉತ್ಪನ್ನಗಳ ಹಣದುಬ್ಬರ ಸೆಪ್ಟೆಂಬರ್‌ನಲ್ಲಿ ಶೇ 10.68ರಷ್ಟಿತ್ತು. ಅಕ್ಟೋಬರ್‌ನಲ್ಲಿ ಶೇ 11.07ಕ್ಕೆ ಏರಿಕೆಯಾಗಿದೆ.

ಚಿಲ್ಲರೆ ಹಣದುಬ್ಬರದ ಪ್ರಮಾಣದ ಆಧಾರದ ಮೇಲೆ ಆರ್‌ಬಿಐ ಬಡ್ಡಿದರ ಬದಲಿಸುವ ನಿರ್ಧಾರ ತೆಗೆದುಕೊಳ್ಳುತ್ತದೆ. ಚಿಲ್ಲರೆ ಹಣದುಬ್ಬರವನ್ನು ಶೇ 4ರ (ಶೇ 2 ಹೆಚ್ಚು ಅಥವಾ ಶೇ 2 ಕಡಿಮೆ) ಮಟ್ಟದಲ್ಲಿ ನಿಯಂತ್ರಿಸಬೇಕು ಎನ್ನುವುದು ಸರ್ಕಾರವು ಆರ್‌ಬಿಐಗೆ ನೀಡಿರುವ ಸೂಚನೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು