ಸೋಮವಾರ, ಅಕ್ಟೋಬರ್ 18, 2021
23 °C

ಚಿಲ್ಲರೆ ಹಣದುಬ್ಬರ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಆಹಾರ ವಸ್ತುಗಳ ಬೆಲೆ ಕಡಿಮೆ ಆಗಿರುವುದರಿಂದ ಚಿಲ್ಲರೆ ಹಣದುಬ್ಬರವು ಸೆಪ್ಟೆಂಬರ್‌ನಲ್ಲಿ ಶೇ 4.35ಕ್ಕೆ ಇಳಿಕೆ ಆಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ಮಂಗಳವಾರ ಹೇಳಿದೆ.

ಗ್ರಾಹಕರ ದರ ಸೂಚ್ಯಂಕ (ಸಿಪಿಐ) ಆಧರಿಸಿದ ಹಣ ದುಬ್ಬರವು ಆಗಸ್ಟ್‌ನಲ್ಲಿ ಶೇ 5.30ರಷ್ಟಿತ್ತು. 2020ರ ಸೆಪ್ಟೆಂಬರ್‌ ನಲ್ಲಿ ಶೇ 7.27ರಷ್ಟು ಗರಿಷ್ಠ ಮಟ್ಟಕ್ಕೆ ತಲುಪಿತ್ತು.

ಆಹಾರ ವಸ್ತುಗಳ ಹಣದುಬ್ಬರವು ಆಗಸ್ಟ್‌ನಲ್ಲಿ ಶೇ 3.11ರಷ್ಟು ಇತ್ತು. ಇದು ಸೆಪ್ಟೆಂಬರ್‌ನಲ್ಲಿ ಶೇ 0.68ಕ್ಕೆ ಇಳಿಕೆ
ಆಗಿದೆ ಎಂದು ಎನ್‌ಎಸ್ಒ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ಇದೆ.

ಕೈಗಾರಿಕಾ ಉತ್ಪಾದನೆ ಶೇ 11.9ರಷ್ಟು ಬೆಳವಣಿಗೆ

ದೇಶದ ಕೈಗಾರಿಕಾ ವಲಯದ ಉತ್ಪಾದನೆಯು ಆಗಸ್ಟ್‌ ನಲ್ಲಿ ಶೇ 11.9ರಷ್ಟು ಬೆಳವಣಿಗೆ ಕಂಡಿದೆ ಎಂದು ಎನ್‌ಎಸ್‌ಒ ಮಾಹಿತಿ ನೀಡಿದೆ. ಎನ್‌ಎಸ್‌ಒ ಮಂಗಳವಾರ ಬಿಡುಗಡೆ ಮಾಡಿರುವ ಅಂಕಿ–ಅಂಶಗಳ ಪ್ರಕಾರ, ಕೈಗಾರಿಕಾ ಉತ್ಪಾದನಾ ಸೂಚ್ಯಂಕಕ್ಕೆ (ಐಐಪಿ) ಶೇ 77.63ರಷ್ಟು ಕೊಡುಗೆ ನೀಡುವ ತಯಾರಿಕಾ ವಲಯವು ಶೇ 9.7ರಷ್ಟು ಬೆಳವಣಿಗೆ ಕಂಡಿದೆ. ಗಣಿಗಾರಿಕೆಯ ಉತ್ಪಾದನೆಯು ಶೇ 23.6 ರಷ್ಟು ಮತ್ತು ವಿದ್ಯುತ್‌ ಉತ್ಪಾದನೆಯು ಶೇ 16ರಷ್ಟು ಹೆಚ್ಚಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು