ಗುರುವಾರ , ನವೆಂಬರ್ 26, 2020
20 °C

ಎಚ್‌ಸಿಎಲ್‌ ಟೆಕ್ನಾಲಜೀಸ್ | ಮೊದಲ ಮಹಿಳಾ ಅಧ್ಯಕ್ಷೆಯಾಗಿ ರೋಶನಿ ನಾಡಾರ್ ನೇಮಕ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಷೇರುಪೇಟೆಯಲ್ಲಿ ನೋಂದಾಯಿತ ಐ.ಟಿ ಕಂಪನಿ ಎಚ್‌ಸಿಎಲ್‌ ಟೆಕ್ನಾಲಜೀಸ್‌ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ರೋಶನಿ ನಾಡಾರ್ ಮಲ್ಹೋತ್ರ ನೇಮಕವಾಗಿದ್ದಾರೆ.

ಕಂಪನಿ ಅಧ್ಯಕ್ಷ ಶಿವ ನಾಡಾರ್‌ ಅವರು ಅಧಿಕಾರದಿಂದ ಕೆಳಗಿಳಿದಿದ್ದು, ಅವರ ಮಗಳು ರೋಶನಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಅಧ್ಯಕ್ಷೆಯಾಗಿ ನೇಮಿಸಲಾಗಿದೆ ಎಂದು ಕಂಪನಿ ಶುಕ್ರವಾರ ಘೋಷಿಸಿದೆ.

ಎಚ್‌ಸಿಎಲ್‌ ಕಾರ್ಪೊರೇಷನ್‌ನ ಸಿಇಒ ಆಗಿಯೂ ಅವರು ಮುಂದುವರಿಯಲಿದ್ದಾರೆ. ದೇಶದ ಅತ್ಯಂತ ಸಿರಿವಂತ ಮಹಿಳೆ ರೋಶನಿ, 2013ರಲ್ಲಿ ಕಂಪನಿಯ ಆಡಳಿತ ಮಂಡಳಿ ಸೇರಿದರು. ಬಳಿಕ ಉಪಾಧ್ಯಕ್ಷೆಯಾದ್ದರು. ಶಿವ ನಾಡಾರ್ ಅವರು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು