ಬುಧವಾರ, ಏಪ್ರಿಲ್ 21, 2021
24 °C

ಕಳೆದ ಎರಡು ವರ್ಷಗಳಲ್ಲಿ ₹2 ಸಾವಿರದ ಮುಖಬೆಲೆಯ ನೋಟುಗಳನ್ನು ಮುದ್ರಿಸಿಲ್ಲ: ಸರ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ₹ 2 ಸಾವಿರ ಮುಖಬೆಲೆಯ ನೋಟುಗಳ ಪ್ರಮಾಣ ಕಡಿಮೆ ಆಗಿದ್ದರೂ ಕಳೆದ ಎರಡು ವರ್ಷಗಳಲ್ಲಿ ಈ ಮುಖಬೆಲೆಯ ನೋಟುಗಳನ್ನು ಮುದ್ರಿಸಿಲ್ಲ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಲೋಕಸಭೆಗೆ ತಿಳಿಸಿದ್ದಾರೆ.

2018ರ ಮಾರ್ಚ್ 30ರ ವೇಳೆಗೆ ₹ 2 ಸಾವಿರ ಮುಖಬೆಲೆಯ 336.2 ಕೋಟಿ ಕರೆನ್ಸಿ ನೋಟುಗಳು ಚಲಾವಣೆಯಲ್ಲಿ ಇದ್ದವು. 2021ರ ಫೆಬ್ರುವರಿ 26ರ ವೇಳೆಗೆ ಅವುಗಳ ಸಂಖ್ಯೆ 249.9 ಕೋಟಿಗೆ ಇಳಿಕೆ ಆಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

2019–20 ಮತ್ತು 2020–21ರಲ್ಲಿ ₹ 2 ಸಾವಿರ ಮುಖಬೆಲೆಯ ನೋಟುಗಳನ್ನು ಮುದ್ರಿಸಲು ಮುದ್ರಣಾಲಯಗಳಿಗೆ ಕೋರಿಕೆ ಕಳುಹಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು