ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆರಿಗೆದಾರರಿಗೆ ₹ 88,852 ಕೋಟಿ ಮರುಪಾವತಿ

Last Updated 21 ಆಗಸ್ಟ್ 2020, 20:32 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ 24 ಲಕ್ಷ ತೆರಿಗೆದಾರರಿಗೆ ₹88,652 ಕೋಟಿ ಆದಾಯ ತೆರಿಗೆ ಮರುಪಾವತಿ (ರಿಫಂಡ್) ಮಾಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಶುಕ್ರವಾರ ತಿಳಿಸಿದೆ.

23.05 ಲಕ್ಷ ತೆರಿಗೆದಾರರಿಗೆ ₹28,180 ಕೋಟಿ ಹಾಗೂ 1.58 ಲಕ್ಷ ತೆರಿಗೆದಾರರ ₹60,472 ಕೋಟಿ ಕಾರ್ಪೊರೇಟ್ ತೆರಿಗೆ ಮರುಪಾವತಿ ಮಾಡಲಾಗಿದೆ.

ಕೋವಿಡ್–19 ಸಾಂಕ್ರಾಮಿಕದ ಈ ಸಮಯದಲ್ಲಿ ತೆರಿಗೆದಾರರಿಗೆ ಯಾವುದೇ ತೊಂದರೆಗಳಿಲ್ಲದೆ ತೆರಿಗೆ ಸಂಬಂಧಿತ ಸೇವೆಗಳನ್ನು ಒದಗಿಸಲು ಸರ್ಕಾರ ಒತ್ತು ನೀಡಿದೆ. ಈ ದಿಸೆಯಲ್ಲಿ, ಬಾಕಿ ಇದ್ದ ತೆರಿಗೆ ಮರುಪಾವತಿಯನ್ನು ಪೂರ್ಣಗೊಳಿಸಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT