ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ರೂಪಾಯಿ

Published 17 ಆಗಸ್ಟ್ 2023, 23:13 IST
Last Updated 17 ಆಗಸ್ಟ್ 2023, 23:13 IST
ಅಕ್ಷರ ಗಾತ್ರ

ಮುಂಬೈ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಗುರುವಾರದ ವಹಿವಾಟಿನಲ್ಲಿ ಸಾರ್ವಕಾಲಿಕ ಕನಿಷ್ಠ ಮಟ್ಟವಾದ ₹83.09ಕ್ಕೆ ಕುಸಿದಿದೆ. ಡಾಲರ್‌ ಬಲವರ್ಧನೆ ಹಾಗೂ ದೇಶಿ ಬಂಡವಾಳ ಮಾರುಕಟ್ಟೆಯಲ್ಲಿ ನಕಾರಾತ್ಮಕ ವಹಿವಾಟು ನಡೆದಿದ್ದು ಇದಕ್ಕೆ ಕಾರಣ.

ಗುರುವಾರದ ವಹಿವಾಟಿನ ನಡುವಿನಲ್ಲಿ ರೂಪಾಯಿ ಮೌಲ್ಯವು ₹83.16ರವರೆಗೂ ಕುಸಿದಿತ್ತು. ‘ಏಷ್ಯಾದ ಇತರ ಕರೆನ್ಸಿಗಳ ರೀತಿಯಲ್ಲಿಯೇ ರೂಪಾಯಿ ಕೂಡ ಕುಸಿತ ಕಂಡಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಸಂಶೋಧನಾ ವಿಶ್ಲೇಷಕ ದಿಲೀಪ್ ಪಾರ್ಮರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT