ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾಲರ್‌ ಎದುರು ರೂಪಾಯಿ ಮೌಲ್ಯ 10 ಪೈಸೆ ಇಳಿಕೆ

Last Updated 22 ಜೂನ್ 2021, 6:20 IST
ಅಕ್ಷರ ಗಾತ್ರ

ಮುಂಬೈ: ಮಂಗಳವಾರ ದಿನದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್‌ ಡಾಲರ್‌ ಎದುರು ರೂಪಾಯಿ ಮೌಲ್ಯ 10 ಪೈಸೆ ಕುಸಿದು 74.20ಕ್ಕೆ ವಿನಿಮಯಗೊಂಡಿದೆ.

ಸೋಮವಾರ ಡಾಲರ್‌ ಎದುರು ರೂಪಾಯಿ ಮೌಲ್ಯ 74.10 ರಷ್ಟಿತ್ತು. ಇತರೆ ಕರೆನ್ಸಿಗಳ ಎದುರು ಡಾಲರ್‌ ಮೌಲ್ಯ 0.03ರಷ್ಟು ಏರಿಕೆ ಕಂಡು 91.93ರಂತೆ ವಿನಿಮಯಗೊಂಡಿತ್ತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರ ಶೇ 0.32ರಷ್ಟು ಏರಿಕೆಯಾಗಿ ಒಂದು ಬ್ಯಾರೆಲ್‌ಗೆ 75.14 ಡಾಲರ್‌ಗೆ ಮಾರಾಟವಾಯಿತು.

ಜಾಗತಿಕ ಷೇರುಪೇಟೆಗಳ ವಹಿವಾಟು ಮತ್ತು ತೈಲ ಬೆಲೆ ಏರಿಕೆಯು ದೇಶಿ ಷೇರುಪೇಟೆಯ ಮೇಲೆ ಪರಿಣಾಮ ಬೀರುತ್ತಿವೆ.

ಏಷ್ಯಾದ ಇತರ ಕರೆನ್ಸಿಗಳು ದಿನದ ಆರಂಭಿಕ ವಹಿವಾಟಿನಲ್ಲಿ ನಷ್ಟದೊಂದಿಗೆ ವಿನಮಯಗೊಂಡಿವೆ ಎಂದು ರಿಲಯನ್ಸ್‌ ಸೆಕ್ಯುರಿಟೀಸ್‌ ಸಂಶೋಧನಾ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT