ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ರೂಪಾಯಿ

Last Updated 31 ಮೇ 2022, 16:36 IST
ಅಕ್ಷರ ಗಾತ್ರ

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಮಂಗಳವಾರ 17 ಪೈಸೆಯಷ್ಟು ಕುಸಿದಿದೆ. ಇದರಿಂದಾಗಿ ರೂಪಾಯಿ ಮೌಲ್ಯವು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 77.71ಕ್ಕೆ ತಲುಪಿದೆ.

ಅಮೆರಿಕದಲ್ಲಿ ಬಾಂಡ್‌ಗಳ ಮೇಲಿನ ಗಳಿಕೆ ಹೆಚ್ಚಾಗುತ್ತಿರುವುದು, ದೇಶದ ಷೇರುಪೇಟೆಗಳಲ್ಲಿ ಕುಸಿತ, ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ವಿದೇಶಿ ವಿನಿಮಯದ ಹೊರಹರಿವು ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾದವು ಎಂದು ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT