ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದು ತಿಂಗಳ ಕನಿಷ್ಠ ಮಟ್ಟಕ್ಕೆ ರೂಪಾಯಿ ಮೌಲ್ಯ

Last Updated 8 ಏಪ್ರಿಲ್ 2021, 16:42 IST
ಅಕ್ಷರ ಗಾತ್ರ

ಮುಂಬೈ: ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯವು ಗುರುವಾರದ ವಹಿವಾಟಿನಲ್ಲಿ 11 ಪೈಸೆಯಷ್ಟು ಕಡಿಮೆ ಆಯಿತು. ಇದರ ಪರಿಣಾಮವಾಗಿ, ರೂಪಾಯಿ ಮೌಲ್ಯವು ಐದು ತಿಂಗಳ ಕನಿಷ್ಠ ಮಟ್ಟಕ್ಕೆ ತಲುಪಿದಂತಾಗಿದೆ.

ಗುರುವಾರದ ವಹಿವಾಟಿನ ಕೊನೆಯಲ್ಲಿ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು 74.58 ಆಗಿತ್ತು. ರೂಪಾಯಿ ಮೌಲ್ಯವು ಬುಧವಾರ 105 ಪೈಸೆಗಳಷ್ಟು ಕುಸಿತ ದಾಖಲಿಸಿತ್ತು. ಕಳೆದ ನಾಲ್ಕು ವಹಿವಾಟಿನ ದಿನಗಳಲ್ಲಿ ರೂಪಾಯಿ ಮೌಲ್ಯದಲ್ಲಿ 146 ಪೈಸೆಯಷ್ಟು ಇಳಿಕೆ ಆಗಿದೆ.

‘ಕೋವಿಡ್–19 ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಲಸಿಕೆ ಮತ್ತು ಆರೋಗ್ಯ ಉತ್ಪನ್ನಗಳ ಮೇಲೆ ಸರ್ಕಾರ ಮಾಡುವ ವೆಚ್ಚಗಳು ಹೆಚ್ಚುತ್ತಲೇ ಇರಲಿವೆ. ರೂಪಾಯಿ ಮೌಲ್ಯವು ಡಾಲರ್ ಎದುರು 74.45ರಿಂದ 75.15ರ ಹಂತ ತಲುಪಬಹುದು’ ಎಂದು ಎಲ್‌ಕೆಪಿ ಸೆಕ್ಯುರಿಟೀಸ್‌ನ ಹಿರಿಯ ಸಂಶೋಧನಾ ವಿಶ್ಲೇಷಕ ಜತಿನ್ ತ್ರಿವೇದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT