ಗುರುವಾರ , ಆಗಸ್ಟ್ 5, 2021
21 °C

ಡಾಲರ್‌ ಎದುರು ರೂಪಾಯಿ ಮೌಲ್ಯ 5 ಪೈಸೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಶುಕ್ರವಾರ ದಿನದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್‌ ಡಾಲರ್‌ ಎದುರು 7 ಪೈಸೆ ಇಳಿಕೆ ಕಂಡಿದ್ದ ರೂಪಾಯಿ ಮೌಲ್ಯ ನಂತರ 5 ಪೈಸೆ ಚೇತರಿಕೆ ಕಂಡು 75.13ಕ್ಕೆ ವಿನಿಮಯಗೊಂಡಿದೆ. 

ಗುರುವಾರ ಡಾಲರ್‌ ಎದುರು ರೂಪಾಯಿ ಮೌಲ್ಯ 75.18 ರಷ್ಟಿತ್ತು. ಇತರೆ ಕರೆನ್ಸಿಗಳ ಎದುರು ಡಾಲರ್‌ ಮೌಲ್ಯ 0.09ರಷ್ಟು ಕುಸಿದು 96.25ರಂತೆ ವಿನಿಮಯಗೊಂಡಿದೆ. 

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರ ಶೇ 0.21ರಷ್ಟು ಇಳಿಕೆಯಾಗಿ ಒಂದು ಬ್ಯಾರೆಲ್‌ಗೆ 43.28 ಡಾಲರ್‌ಗೆ ಮಾರಾಟವಾಯಿತು.

ಜಾಗತಿಕ ಷೇರುಪೇಟೆಗಳ ವಹಿವಾಟು ಮತ್ತು ಕೋವಿಡ್‌ ಪ್ರಕರಣಗಳು ದೇಶಿ ಷೇರುಪೇಟೆಯ ಮೇಲೆ ಪರಿಣಾಮ ಬೀರುತ್ತಿವೆ.

ಸದ್ಯ ವಿಶ್ವದಾದ್ಯಂತ ಕೋವಿಡ್‌ ಸೋಂಕಿತರ ಸಂಖ್ಯೆ 1.37 ಕೋಟಿ ದಾಟಿದ್ದು, ಸಾವಿನ ಸಂಖ್ಯೆ 5.89 ಲಕ್ಷ ಮುಟ್ಟಿದೆ. ಇತ್ತ ಭಾರತದಲ್ಲಿ ಸೋಂಕಿತರ ಸಂಖ್ಯೆ 10,03,832 ಕ್ಕೆ ಏರಿಕೆಯಾಗಿದ್ದು, 25,602 ಮಂದಿ ಸಾವಿಗೀಡಾಗಿದ್ದಾರೆ. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು