ಗುರುವಾರ , ನವೆಂಬರ್ 21, 2019
21 °C

ರೂಪಾಯಿ ಮೌಲ್ಯ 52 ಪೈಸೆ ಹೆಚ್ಚಳ

Published:
Updated:

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 52 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 71.14ರಂತೆ ವಿನಿಮಯಗೊಂಡಿತು.

ಅಮೆರಿಕ–ಚೀನಾ ವಾಣಿಜ್ಯ ಸಂಘರ್ಷ ಕಡಿಮೆಯಾಗುವ ಸೂಚನೆಗಳು ದೊರೆತಿವೆ. ಕಚ್ಚಾ ತೈಲ ದರ ಇಳಿಕೆ ಮತ್ತು ವಿದೇಶಿ ಬಂಡವಾಳ ಒಳಹರಿವಿನಿಂದ ರೂಪಾಯಿ ಮೌಲ್ಯದಲ್ಲಿ ಏರಿಕೆಯಾಗಿದೆ ಎಂದು ವರ್ತಕರು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)