ಡಾಲರ್ ಎದುರು ರೂಪಾಯಿ ಮೌಲ್ಯ 11 ಪೈಸೆ ಇಳಿಕೆ

ಮುಂಬೈ: ದಿನದ ಆರಂಭಿಕ ವಹಿವಾಟಿನಲ್ಲಿ ಶುಕ್ರವಾರ ಅಮೆರಿಕನ್ ಡಾಲರ್ ಎದುರು ರೂಪಾಯಿ ಮೌಲ್ಯ 11 ಪೈಸೆ ಇಳಿಕೆ ಕಂಡು 73.65ಕ್ಕೆ ವಿನಿಮಯಗೊಂಡಿದೆ.
ಗುರುವಾರ ಡಾಲರ್ ಎದುರು ರೂಪಾಯಿ ಮೌಲ್ಯ 4 ಪೈಸೆ ಏರಿಕೆಯಾಗಿ 73.54ರಷ್ಟಿತ್ತು. ಇತರೆ ಕರೆನ್ಸಿಗಳ ಎದುರು ಡಾಲರ್ ಮೌಲ್ಯ 0.11ರಷ್ಟು ಏರಿಕೆಯಾಗಿ 93.05 ರಂತೆ ವಿನಿಮಯಗೊಂಡಿತ್ತು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರ ಶೇ 0.31ರಷ್ಟು ಏರಿಕೆಯಾಗಿ ಒಂದು ಬ್ಯಾರೆಲ್‌ಗೆ 42.59 ಡಾಲರ್‌ಗೆ ಮಾರಾಟವಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.