ಭಾನುವಾರ, ಫೆಬ್ರವರಿ 5, 2023
21 °C

16 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ ಮೌಲ್ಯ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 16 ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಗುರುವಾರದ ವಹಿವಾಟಿನಲ್ಲಿ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು 75.60ಕ್ಕೆ ಇಳಿಕೆ ಆಗಿದೆ.

ದೇಶದ ಷೇರು ಮಾರುಕಟ್ಟೆಗಳಿಂದ ವಿದೇಶಿ ಹೂಡಿಕೆ ಹಿಂದಕ್ಕೆ ಹೋಗುತ್ತಿರುವುದು ಮತ್ತು ಅಮೆರಿಕದ ಡಾಲರ್ ಬಲಗೊಳ್ಳುತ್ತಿರುವುದು ಇದಕ್ಕೆ ಕಾರಣ ಎಂದು ತಜ್ಞರು ಹೇಳಿದ್ದಾರೆ. 

ಈ ಮೊದಲು 2020ರ ಜುಲೈ 1ರಂದು ರೂಪಾಯಿ ಮೌಲ್ಯವು ಈಗಿನ ಹಂತವನ್ನು ತಲುಪಿತ್ತು. ಆರ್‌ಬಿಐನ ದ್ವೈಮಾಸಿಕ ಹಣಕಾಸು ನೀತಿಯು ವಿದೇಶಿ ವಿನಿಯಮ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಹೆಚ್ಚಿಸಲು ನೆರವಾಗಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು