ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂಪಾಯಿ ಮೌಲ್ಯ ಇಳಿಕೆ

Last Updated 4 ಫೆಬ್ರುವರಿ 2019, 18:33 IST
ಅಕ್ಷರ ಗಾತ್ರ

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರ ಡಾಲರ್‌ ಎದುರು ರೂಪಾಯಿ ಮೌಲ್ಯ 55 ಪೈಸೆ ಇಳಿಕೆಯಾಗಿ ಒಂದು ಡಾಲರ್‌ಗೆ ₹ 71.80ರಂತೆ ವಿನಿಮಯಗೊಂಡಿತು.

ಸತತ ಎರಡನೇ ವಹಿವಾಟು ಅವಧಿಯಲ್ಲಿ ಒಟ್ಟು 72 ಪೈಸೆಗಳಷ್ಟು ಇಳಿಕೆ ಕಂಡಿದೆ.

ವಿದೇಶಿ ಬಂಡವಾಳ ಹೊರಹರಿವು ಮತ್ತು ಡಾಲರ್ ಮೌಲ್ಯ ವೃದ್ಧಿಯಿಂದಾಗಿ ರೂಪಾಯಿ ಮೌಲ್ಯದಲ್ಲಿ ಇಳಿಕೆ ಕಾಣುತ್ತಿದೆ ಎಂದು ವರ್ತಕರು ಹೇಳಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರ ಶೇ 0.16ರಷ್ಟು ಹೆಚ್ಚಾಗಿ ಒಂದು ಬ್ಯಾರೆಲ್‌ಗೆ 62.97 ಡಾಲರ್‌ಗಳಂತೆ ಮಾರಾಟವಾಗಿದೆ.

ಬ್ರೆಂಟ್‌ ತೈಲ ಒಂದು ವಾರದಲ್ಲಿ ಶೇ 6ರಷ್ಟು ಏರಿಕೆ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT