ಬುಧವಾರ, ಜುಲೈ 15, 2020
21 °C
ಬಾಂಗ್ಲಾದೇಶದ ಗ್ರಾಮೀಣ ಬ್ಯಾಂಕ್‌ ಸ್ಥಾಪಕ ಮುಹಮ್ಮದ್‌ ಯೂನುಸ್‌ ಪ್ರತಿಪಾದನೆ

ವಲಸೆ ತಡೆಗೆ ಸದೃಢ ಗ್ರಾಮೀಣ ಆರ್ಥಿಕತೆ ಅಗತ್ಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: 'ಕೊರೊನಾ ವೈರಾಣು ಪಿಡುಗು ಒಡ್ಡಿರುವ ಆರ್ಥಿಕ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಗ್ರಾಮೀಣ ಆರ್ಥಿಕತೆಯನ್ನು ಸದೃಢಗೊಳಿಸುವ ತುರ್ತು ಅಗತ್ಯ ಇದೆ’ ಎಂದು ಬಾಂಗ್ಲಾದೇಶದ ಗ್ರಾಮೀಣ ಬ್ಯಾಂಕ್‌ ಸ್ಥಾಪಕ  ಮುಹಮ್ಮದ್‌ ಯೂನುಸ್‌ ಅಭಿಪ್ರಾಯಪಟ್ಟಿದ್ದಾರೆ.

ಕಿರು ಹಣಕಾಸು ಸಂಸ್ಥೆಗಳು ಏರ್ಪಡಿಸಿದ್ದ ಆನ್‌ಲೈನ್‌ ವಿಚಾರಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ‘ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಕಿರು ಹಣಕಾಸು ಸಂಸ್ಥೆಗಳು ಪ್ರಮುಖ ಪಾತ್ರ ನಿರ್ವಹಿಸುತ್ತವೆ. ಸ್ವತಂತ್ರ ಮತ್ತು ಸದೃಢ ಗ್ರಾಮೀಣ ಆರ್ಥಿಕತೆಯು ಹಳ್ಳಿಗಳಿಂದ ನಗರಗಳಿಗೆ ಜನರು ವಲಸೆ ಹೋಗುವುದನ್ನು ತಡೆಗಟ್ಟಲಿದೆ. ಮುಂಬರುವ ವರ್ಷಗಳಲ್ಲಿ ನಗರಗಳಿಂದ ಗ್ರಾಮೀಣ ಪ್ರದೇಶಕ್ಕೆ ವಲಸೆಗೆ ಅವಕಾಶ ಮಾಡಿಕೊಡಲಿದೆ’ ಎಂದು ಹೇಳಿದ್ದಾರೆ.

’ಗ್ರಾಮೀಣ ಪ್ರದೇಶದಲ್ಲಿ ಉದ್ಯಮಶೀಲತೆ ಬೆಳೆಯಲು, ಹೊಸ ಉದ್ಯಮಿಗಳನ್ನು ಸೃಷ್ಟಿಸಲು ಕಿರು ಹಣಕಾಸು ಕಂಪನಿಗಳು  ಬಂಡವಾಳ ಹೂಡಿಕೆಯ ಅಗತ್ಯ ಪೂರೈಸಬೇಕು’ ಎಂದು ಕಿವಿಮಾತು ಹೇಳಿದ್ದಾರೆ. ಇವರು ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತರೂ ಆಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.