ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಭಾಗದಿಂದ ಉತ್ತಮ ಬೇಡಿಕೆ: ಮಾರುತಿ ನಿರೀಕ್ಷೆ

Last Updated 5 ಜುಲೈ 2020, 13:05 IST
ಅಕ್ಷರ ಗಾತ್ರ

ನವದೆಹಲಿ: ನಗರ ಪ್ರದೇಶಕ್ಕೆ ಹೋಲಿಸಿದರೆ ಕೋವಿಡ್‌ ಪ್ರಕರಣಗಳು ಕಡಿಮೆ ಇರುವ ಗ್ರಾಮೀಣ ಪ್ರದೇಶಗಳಿಂದ ಕಾರ್‌ಗಳಿಗೆ ಉತ್ತಮ ಬೇಡಿಕೆ ಬರುವ ನಿರೀಕ್ಷೆ ಇದೆ ಎಂದು ಮಾರುತಿ ಸುಜುಕಿ ಇಂಡಿಯಾ ಕಂಪನಿ ಹೇಳಿದೆ.

ಜೂನ್‌ನಲ್ಲಿ ಆರಂಭಿಕ ಹಂತದ ಮಳೆ ಉತ್ತಮವಾಗಿದ್ದು, ಮುಂಗಾರು ಹಂಗಾಮಿನ ಬಿತ್ತನೆಗೆ ಪೂರಕವಾಗಿರುವ ಅಂದಾಜು ಮಾಡಲಾಗಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಖರೀದಿ ಪ್ರವೃತ್ತಿಯು ಉತ್ತಮವಾಗಿರಲಿದೆ ಎಂದು ನಿರೀಕ್ಷಿಸಿದೆ.

‘ಜೂನ್‌ನಲ್ಲಿ ಗ್ರಾಮೀಣ ಪ್ರದೇಶದಲ್ಲಿನ ಬೇಡಿಕೆಯು ಜೂನ್‌ನಲ್ಲಿ ಶೇ 40ರಷ್ಟಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 1ರಷ್ಟು ಹೆಚ್ಚಳವಾಗಿದೆ’ ಎಂದು ಕಂಪನಿಯ ಮಾರುಕಟ್ಟೆ ವಿಭಾಗದ ಕಾರ್ಯನಿರ್ವಾಹಕ ನಿರ್ದೇಶಕ ಶಶಾಂಕ್‌ ಶ್ರೀವಾಸ್ತವ ತಿಳಿಸಿದ್ದಾರೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮಾರಾಟ ಇಳಿಮುಖವಾಗಿದೆ. ಆದರೆ, ನಗರಕ್ಕೆ ಹೋಲಿಸಿದರೆ ಗ್ರಾಮೀಣ ಭಾಗದಲ್ಲಿ ತುಸು ಉತ್ತಮವಾಗಿದೆ ಎಂದಿದ್ದಾರೆ.

ಕೋವಿಡ್‌ ಹರಡುವಿಕೆಯ ಮೇಲೆ ಬೇಡಿಕೆ ನಿರ್ಧಾರವಾಗಲಿದೆ. ಸದ್ಯದ ಮಟ್ಟಿಗೆ ಬೇಡಿಕೆಯು ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಮೇ ತಿಂಗಳಿಗೆ ಹೋಲಿಸಿದರೆ ಜೂನ್‌ನಲ್ಲಿ ಮಾರಾಟ ಹೆಚ್ಚಾಗಿದೆ. ತಯಾರಿಕಾ ಚಟುವಟಿಕೆಗಳಿಗೂ ವೇಗ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT