ಮಾಸ್ಕೊ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ತೀವ್ರ ಪ್ರಮಾಣದ ಏರಿಳಿತಗಳು ಇಲ್ಲದಂತೆ ನೋಡಿಕೊಳ್ಳಲು ‘ಒಪೆಕ್+’ (ಪೆಟ್ರೋಲಿಯಂ ರಫ್ತು ಮಾಡುವ ದೇಶಗಳು ಹಾಗೂ ಆ ದೇಶಗಳ ಮಿತ್ರ ರಾಷ್ಟ್ರಗಳ ಒಕ್ಕೂಟ) ಸಂಘಟನೆಯು ಪ್ರಯತ್ನಿಸಲಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸರ್ಗೈ ಲಾವ್ರೊವ್ ಬುಧವಾರ ಹೇಳಿದ್ದಾರೆ.
ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಈಗ ಸಿಗುತ್ತಿರುವ ಬೆಲೆಯು ಉತ್ಪಾದಕ ಹಾಗೂ ಗ್ರಾಹಕ ದೇಶಗಳ ಹಿತವನ್ನು ಕಾಯುವಂತೆ ಇದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸೌದಿ ಅರೇಬಿಯಾದ ವಿದೇಶಾಂಗ ಸಚಿವರ ಜೊತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಲಾವ್ರೊವ್, ‘ರಷ್ಯಾ ಮತ್ತು ಸೌದಿ ಅರೇಬಿಯಾ ದೇಶಗಳು ಒಟ್ಟಾಗಿ ಒಪೆಕ್+ ಒಕ್ಕೂಟದಲ್ಲಿ ಸಹಕಾರ ಹೆಚ್ಚುವಂತೆ ಮಾಡುವ ಯೋಜನೆ ಹೊಂದಿವೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.