ಬುಧವಾರ, ಜುಲೈ 28, 2021
28 °C

ಕೆಲವೇ ತಿಂಗಳುಗಳಲ್ಲಿ ಮಾರಾಟದಲ್ಲಿ ಚೇತರಿಕೆ: ಎಂಜಿ ಮೋಟರ್‌

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಆಗುತ್ತಿರುವುದರಿಂದ, ಹಲವು ರಾಜ್ಯಗಳಲ್ಲಿ ಲಾಕ್‌ಡೌನ್‌ ನಿರ್ಬಂಧಗಳನ್ನು ಸಡಿಲಿಸಲಾಗುತ್ತಿದೆ. ಹೀಗಾಗಿ ಮುಂದಿನ ಕೆಲವೇ ತಿಂಗಳುಗಳಲ್ಲಿ ವಾಹನ ಮಾರಾಟದಲ್ಲಿ ಚೇತರಿಕೆ ಕಾಣುವ ನಿರೀಕ್ಷೆ ಇದೆ ಎಂದು ಎಂಜಿ ಮೋಟರ್‌ ಇಂಡಿಯಾದ ಅಧ್ಯಕ್ಷ ರಾಜೀವ್ ಛಾಬಾ ಹೇಳಿದ್ದಾರೆ.

‘ಈ ವರ್ಷ ಶೇಕಡ 30ರಿಂದ ಶೇ 40ರಷ್ಟು ಮಾರಾಟ ಪ್ರಗತಿ ಸಾಧಿಸುವ ನಿರೀಕ್ಷೆಯಲ್ಲಿ ಇದ್ದೆವು. ಆದರೆ, ಕೋವಿಡ್‌ನ ಎರಡನೇ ಅಲೆಯ ಕಾರಣದಿಂದಾಗಿ ಆ ಪ್ರಮಾಣದ ಬೆಳವಣಿಗೆ ಈಗ ಸಾಧ್ಯವಿಲ್ಲ. ಈ ವರ್ಷದಲ್ಲಿ ಉದ್ಯಮದ ಬೆಳವಣಿಗೆಯು ಶೇ 20ರ ಆಸುಪಾಸಿನಲ್ಲಿ ಇರುವ ಅಂದಾಜು ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ಕಾರುಗಳ ತಯಾರಿಕೆ ಮತ್ತು ಮಾರಾಟದ ಪರಿಸ್ಥಿತಿ ಈಗ ಸುಧಾರಿಸುತ್ತಿದೆ. ಮೇ ತಿಂಗಳಿಗೆ ಹೋಲಿಸಿದರೆ ಜೂನ್‌ನಲ್ಲಿ ಸ್ಥಿತಿ ಉತ್ತಮ ಆಗಿದೆ. ಜುಲೈನಲ್ಲಿ ಇನ್ನಷ್ಟು ಉತ್ತಮ ಆಗುವ ನಿರೀಕ್ಷೆ ಇದೆ. ಮಾರುಕಟ್ಟೆಗಳು ತೆರೆಯಲು ಆರಂಭವಾಗಿದ್ದರೂ ಪೂರೈಕೆಗೆ ಸಂಬಂಧಿಸಿದ ಸವಾಲುಗಳು ಈ ವರ್ಷವೂ ಮುಂದುವರಿಯಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು