ಶುಕ್ರವಾರ, ಆಗಸ್ಟ್ 14, 2020
27 °C

ಕೋವಿಡ್-19 | ಸರ್ಕಾರಿ ಆಸ್ಪತ್ರೆಗೆ ಎಸ್‌ಬಿಐ ಕೊಡುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ತನ್ನ 65ನೇ ಬ್ಯಾಂಕ್‌ ದಿನಾಚರಣೆ ಅಂಗವಾಗಿ ಕೋವಿಡ್‌ ಪೀಡಿತರ ಚಿಕಿತ್ಸೆಗೆ ನೆರವಾಗುವ ಆಮ್ಲಜನಕ ಪೂರೈಸುವ ‘ಎಚ್‌ಎಫ್‌ಎನ್‌ಸಿ‘ ಸಲಕರಣೆಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಕೊಡುಗೆಯಾಗಿ ನೀಡಿದೆ.

ತನ್ನ ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ಕಾರ್ಯಕ್ರಮದಡಿ ₹ 26 ಲಕ್ಷ ವೆಚ್ಚದಲ್ಲಿ ಈ ಸಲಕರಣೆಗಳನ್ನು ಪೂರೈಸಿದೆ.

‘ಕೋವಿಡ್‌ ಪರಿಹಾರ ಕಾರ್ಯಕ್ರಮಗಳಿಗಾಗಿ ಬ್ಯಾಂಕ್‌ ರಾಜ್ಯ ಸರ್ಕಾರಕ್ಕೆ ಇದುವರೆಗೆ ₹  75.49 ಲಕ್ಷ ಮೊತ್ತದ ನೆರವು ನೀಡಿದೆ. ಶೀಘ್ರದಲ್ಲಿಯೇ ಸರ್ಕಾರಿ ಮತ್ತು ಸೇನೆಯ ಆಸ್ಪತ್ರೆಗಳಿಗೆ 10 ವೆಂಟಿಲೇಟರ್‌ಗಳನ್ನು  ವಿತರಿಸಲಿದೆ’ ಎಂದು ಬ್ಯಾಂಕ್‌ನ ಬೆಂಗಳೂರು ವೃತ್ತದ ಚೀಫ್‌ ಜನರಲ್‌ ಮ್ಯಾನೇಜರ್‌ ಅಭಿಜೀತ್‌ ಮಜುಂದಾರ್‌ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು